Genesis · chapter 21 · verse 9
Genesis 21:9 in Kannada
ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
Idallade aiguptya laada haagaralu abrahaamanige hettidda maganu haasyamaaduvadannu saaralu nodi
Genesis 21:9 in English
- King James Version (KJV)
- And Sarah saw the son of Hagar the Egyptian, which she had born unto Abraham, mocking.
- World English Bible (WEB)
- Sarah saw the son of Hagar the Egyptian, whom she had borne to Abraham, mocking.
- American Standard Version (ASV)
- And Sarah saw the son of Hagar the Egyptian, whom she had borne unto Abraham, mocking.
- Bible in Basic English (BBE)
- And Sarah saw the son of Hagar the Egyptian playing with Isaac.
- Darby Translation (DBY)
- And Sarah saw the son of Hagar the Egyptian, whom she had borne to Abraham, mocking.
- Webster's Bible (WBS)
- And Sarah saw the son of Hagar the Egyptian, which she had borne to Abraham, mocking.
- Young's Literal Translation (YLT)
- and Sarah seeth the son of Hagar the Egyptian, whom she hath borne to Abraham, mocking,
Read in context
- 7ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- 8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- 9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
- 10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- 11ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
Cross references
- Galatians 4:29 ಗಲಾತ್ಯದವರಿಗೆ 4:29ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ.
- Genesis 16:15 ಆದಿಕಾಂಡ 16:15ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
- Galatians 4:22 ಗಲಾತ್ಯದವರಿಗೆ 4:22ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
- Genesis 16:1 ಆದಿಕಾಂಡ 16:1ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
- Proverbs 20:11 ಜ್ಞಾನೋಕ್ತಿಗಳು 20:11ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.
- 2 Chronicles 36:16 2 ಪೂರ್ವಕಾಲವೃತ್ತಾಂತ 36:16ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Psalm 44:13–14 ಕೀರ್ತನೆಗಳು 44:13–14ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Lamentations 1:7 ಪ್ರಲಾಪಗಳು 1:7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
- Psalm 22:6 ಕೀರ್ತನೆಗಳು 22:6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
- 2 Chronicles 30:10 2 ಪೂರ್ವಕಾಲವೃತ್ತಾಂತ 30:10ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
- Hebrews 11:36 ಇಬ್ರಿಯರಿಗೆ 11:36ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.