Genesis · chapter 22 · verse 9
Genesis 22:9 in Kannada
ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
Devaru helida sthalakke avaru bandaaga abrahaamanu alli balipeethavannu katti kattigegalannu adara mele kramavaagi jodisi tanna maganaada isaakanannu katti balipeethada mele idda kattigegala mele ittanu.
Genesis 22:9 in English
- King James Version (KJV)
- And they came to the place which God had told him of; and Abraham built an altar there, and laid the wood in order, and bound Isaac his son, and laid him on the altar upon the wood.
- World English Bible (WEB)
- They came to the place which God had told him of. Abraham built the altar there, and laid the wood in order, bound Isaac his son, and laid him on the altar, on the wood.
- American Standard Version (ASV)
- And they came to the place which God had told him of; and Abraham built the altar there, and laid the wood in order, and bound Isaac his son, and laid him on the altar, upon the wood.
- Bible in Basic English (BBE)
- And they came to the place of which God had given him knowledge; and there Abraham made the altar and put the wood in place on it, and having made tight the bands round Isaac his son, he put him on the wood on the altar.
- Darby Translation (DBY)
- And they came to the place of which God had told him. And Abraham built the altar there, and piled the wood; and he bound Isaac his son, and laid him on the altar upon the wood.
- Webster's Bible (WBS)
- And they came to the place which God had named to him; and Abraham built an altar there, and laid the wood in order; and bound Isaac his son, and laid him on the altar upon the wood.
- Young's Literal Translation (YLT)
- And they come in unto the place of which God hath spoken to him, and there Abraham buildeth the altar, and arrangeth the wood, and bindeth Isaac his son, and placeth him upon the altar above the wood;
Read in context
- 7ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು.
- 8ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
- 9ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
- 10ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.
- 11ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
Cross references
- James 2:21 ಯಾಕೋಬನು 2:21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
- Hebrews 11:17–19 ಇಬ್ರಿಯರಿಗೆ 11:17–19ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು. ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Philippians 2:7–8 ಫಿಲಿಪ್ಪಿಯವರಿಗೆ 2:7–8ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Isaiah 53:4–10 ಯೆಶಾಯ 53:4–10ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Matthew 27:2 ಮತ್ತಾಯನು 27:2ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Genesis 22:2–4 ಆದಿಕಾಂಡ 22:2–4ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು. ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು. ಮೂರನೆಯ ದಿನದಲ್ಲಿ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ಆ ಸ್ಥಳವನ್ನು ದೂರದಿಂದ ನೋಡಿದನು.
- Matthew 21:1–46 ಮತ್ತಾಯನು 21:1–46ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ-- ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ. ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು. ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ-- ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ. ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು. ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು. ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು. ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು. ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು. ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು. ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು. ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು. ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ-- ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು. ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು. ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು. ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು. ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು. ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ. ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ. ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು. ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು. ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು. ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು. ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- John 10:17–18 ಯೋಹಾನನು 10:17–18ಯಾಕಂದರೆ ನಾನು ನನ್ನ ಪ್ರಾಣವನ್ನು ತಿರಿಗಿಪಡಕೊಳ್ಳುವಂತೆ ಅದನ್ನು ಕೊಡುತ್ತೇನೆ; ಆದದ ರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- Mark 15:1 ಮಾರ್ಕನು 15:1ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
Original words (Hebrew)
- came · H935בּוֹא bôwʼ
- place · H4725מָקוֹם mâqôwm
- God · H430אֱלֹהִים ʼĕlôhîym
- told · H559אָמַר ʼâmar
- Abraham · H85אַבְרָהָם ʼAbrâhâm
- built · H1129בָּנָה bânâh
- altar · H4196מִזְבֵּחַ mizbêach
- laid · H6186עָרַךְ ʻârak
- wood · H6086עֵץ ʻêts
- order · H6186עָרַךְ ʻârak
- bound · H6123עָקַד ʻâqad
- Isaac · H3327יִצְחָק Yitschâq
- son · H1121בֵּן bên
- laid · H7760שׂוּם sûwm
- altar · H4196מִזְבֵּחַ mizbêach
- upon · H4605מַעַל maʻal
- wood · H6086עֵץ ʻêts