Genesis · chapter 23 · verse 17
Genesis 23:17 in Kannada
ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
Heege mamrege eduraagiruva makpeladalliruva ephro nana holavoo aa holadalliruva gaviyoo aa holada suttaloo iruva ellaa maragaloo
Genesis 23:17 in English
- King James Version (KJV)
- And the field of Ephron, which [was] in Machpelah, which [was] before Mamre, the field, and the cave which [was] therein, and all the trees that [were] in the field, that [were] in all the borders round about, were made sure
- World English Bible (WEB)
- So the field of Ephron, which was in Machpelah, which was before Mamre, the field, the cave which was in it, and all the trees that were in the field, that were in all of its borders, were deeded
- American Standard Version (ASV)
- So the field of Ephron, which was in Machpelah, which was before Mamre, the field, and the cave which was therein, and all the trees that were in the field, that were in all the border thereof round about, were made sure
- Bible in Basic English (BBE)
- So Ephron's field at Machpelah near Mamre, with the hollow in the rock and all the trees in the field and round it,
- Darby Translation (DBY)
- So the field of Ephron, which was at Machpelah, which was before Mamre, the field, and the cave that was in it, and all the trees that were in the field, that were in all its borders round about,
- Webster's Bible (WBS)
- And the field of Ephron, which [was] in Machpelah, which [was] before Mamre, the field and the cave which [was] in it, and all the trees that [were] in the field, that [were] in all the borders round about, were made sure
- Young's Literal Translation (YLT)
- And established are the field of Ephron, which [is] in Machpelah, which [is] before Mamre, the field and the cave which [is] in it, and all the trees which [are] in the field, which [are] in all its border round about,
Read in context
- 15ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
- 16ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
- 17ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ
- 18ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- 19ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Cross references
- Genesis 25:9 ಆದಿಕಾಂಡ 25:9ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
- Genesis 23:20 ಆದಿಕಾಂಡ 23:20ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
- Genesis 49:29–32 ಆದಿಕಾಂಡ 49:29–32ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು. ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Acts 7:16 ಅಪೊಸ್ತಲರ ಕೃತ್ಯಗಳು 7:16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- Jeremiah 32:7–14 ಯೆರೆಮೀಯ 32:7–14ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು. ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು. ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು. ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು. ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು. ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು. ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ-- ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಈ ಪತ್ರಗಳನ್ನು ಅಂದರೆ ಮುದ್ರೆ ಹಾಕಿದ ಈ ಕ್ರಯಪತ್ರವನ್ನೂ ತೆರೆದಿರುವ ಈ ಪತ್ರವನ್ನೂ ತೆಗೆದು ಅವು ಬಹಳ ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Ephesians 5:15 ಎಫೆಸದವರಿಗೆ 5:15ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Ruth 4:7–10 ರೂತಳು 4:7–10ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು. ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು. ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
Original words (Hebrew)
- field · H7704שָׂדֶה sâdeh
- Ephron · H6085עֶפְרוֹן ʻEphrôwn
- Machpelah · H4375מַכְפֵּלָה Makpêlâh
- before · H6440פָּנִים pânîym
- Mamre · H4471מַמְרֵא Mamrêʼ
- field · H7704שָׂדֶה sâdeh
- cave · H4631מְעָרָה mᵉʻârâh
- trees · H6086עֵץ ʻêts
- field · H7704שָׂדֶה sâdeh
- borders · H1366גְּבוּל gᵉbûwl
- about · H5439סָבִיב çâbîyb
- sure · H6965קוּם qûwm