Genesis · chapter 24 · verse 36
Genesis 24:36 in Kannada
ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
Idallade nanna yajamaanana hendatiyaada saaralu mudipraayadalli nanna yajamaananige maganannu hettiddaale. Ivanu tanagiddaddannellaa avanige kottiddaane.
Genesis 24:36 in English
- King James Version (KJV)
- And Sarah my master’s wife bare a son to my master when she was old: and unto him hath he given all that he hath.
- World English Bible (WEB)
- Sarah, my master’s wife, bore a son to my master when she was old. He has given all that he has to him.
- American Standard Version (ASV)
- And Sarah my master’s wife bare a son to my master when she was old: and unto him hath he given all that he hath.
- Bible in Basic English (BBE)
- And when Sarah, my master's wife, was old, she gave birth to a son, to whom he has given all he has.
- Darby Translation (DBY)
- And Sarah, my master's wife, bore a son to my master after she had grown old; and unto him has he given all that he has.
- Webster's Bible (WBS)
- And Sarah, my master's wife, bore a son to my master when she was old: and to him hath he given all that he hath.
- Young's Literal Translation (YLT)
- and Sarah, my lord's wife, beareth a son to my lord, after she hath been aged, and he giveth to him all that he hath.
Read in context
- 34ಅವನು--ನಾನು ಅಬ್ರಹಾಮನ ಸೇವಕನು.
- 35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- 36ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
- 37ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
- 38ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
Cross references
- Genesis 25:5 ಆದಿಕಾಂಡ 25:5ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
- Genesis 21:10 ಆದಿಕಾಂಡ 21:10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- Genesis 21:1–7 ಆದಿಕಾಂಡ 21:1–7ಕರ್ತನು ತಾನು ಹೇಳಿದ ಹಾಗೆ ಸಾರಳನ್ನು ದರ್ಶಿಸಿ ತಾನು ಹೇಳಿದಂತೆ ಸಾರಳಿಗೆ ಮಾಡಿದನು. ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು. ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು. ಆಗ ಸಾರಳು--ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು ಎಂದು ಹೇಳಿ-- ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
- Genesis 18:10–14 ಆದಿಕಾಂಡ 18:10–14ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Genesis 17:15–19 ಆದಿಕಾಂಡ 17:15–19ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ. ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು. ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು. ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು. ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- Romans 4:19 ರೋಮಾಪುರದವರಿಗೆ 4:19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
- Genesis 11:29–30 ಆದಿಕಾಂಡ 11:29–30ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು.