Genesis · chapter 24 · verse 42
Genesis 24:42 in Kannada
ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
Ee dina naanu aa baaviya balige bandaaga --nanna yajamaananaada abrahaamana kartanaada devare, naanu hoguva maarga vannu neenu saphala maaduvadaadare
Genesis 24:42 in English
- King James Version (KJV)
- And I came this day unto the well, and said, O LORD God of my master Abraham, if now thou do prosper my way which I go:
- World English Bible (WEB)
- I came today to the spring, and said, ‘The LORD, the God of my master Abraham, if now you do prosper my way which I go—
- American Standard Version (ASV)
- And I came this day unto the fountain, and said, O Jehovah, the God of my master Abraham, if now thou do prosper my way which I go:
- Bible in Basic English (BBE)
- And I came today to the water-spring, and I said, O Lord, the God of my master Abraham, if it is your purpose to give a good outcome to my journey,
- Darby Translation (DBY)
- And I came this day to the well, and said, Jehovah, God of my master Abraham, if now thou wilt prosper my way on which I go,
- Webster's Bible (WBS)
- And I came this day to the well, and said, O LORD God of my master Abraham, if now thou dost prosper my way which I go:
- Young's Literal Translation (YLT)
- 'And I come to-day unto the fountain, and I say, Jehovah, God of my lord Abraham, if Thou art, I pray Thee, making prosperous my way in which I am going —
Read in context
- 40ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;
- 41ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
- 42ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ --ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರೇ, ನಾನು ಹೋಗುವ ಮಾರ್ಗ ವನ್ನು ನೀನು ಸಫಲ ಮಾಡುವದಾದರೆ
- 43ಇಗೋ, ನಾನು ಈಗ ನೀರಿನ ಬಾವಿಯ ಬಳಿಯಲ್ಲಿ ನಿಂತಿದ್ದೇನೆ; ಹೀಗಿರುವಲ್ಲಿ ಯಾವ ಕನ್ನಿಕೆಯು ನೀರು ತರಲು ಹೊರಗೆ ಬರುವಾಗ ನಾನು ಆಕೆಗೆ--ನಿನ್ನ ಕೊಡದಿಂದ ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು ಎಂದು ಹೇಳುವಾಗ
- 44ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
Cross references
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Psalm 90:17 ಕೀರ್ತನೆಗಳು 90:17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Romans 1:10 ರೋಮಾಪುರದವರಿಗೆ 1:10ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
- Genesis 24:12–14 ಆದಿಕಾಂಡ 24:12–14ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು. ಇಗೋ, ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ; ಊರಿನ ಜನರ ಕುಮಾರ್ತೆಯರು ನೀರು ಸೇದುವದಕ್ಕೆ ಬರುತ್ತಾರೆ. ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
- Ezra 8:21 ಎಜ್ರನು 8:21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
- Psalm 37:5 ಕೀರ್ತನೆಗಳು 37:5ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
- Genesis 24:31 ಆದಿಕಾಂಡ 24:31ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.
- Genesis 39:3 ಆದಿಕಾಂಡ 39:3ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
- Acts 10:22 ಅಪೊಸ್ತಲರ ಕೃತ್ಯಗಳು 10:22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
- Acts 10:7–8 ಅಪೊಸ್ತಲರ ಕೃತ್ಯಗಳು 10:7–8ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರ ವಾಗಿ ಹೇಳಿ ಅವರನ್ನು ಯೊಪ್ಪಕ್ಕೆ ಕಳುಹಿಸಿದನು.