Genesis · chapter 25 · verse 5
Genesis 25:5 in Kannada
ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
Aadare abrahaamanu tanagiddaddannellaa isaaka nige kottanu.
Genesis 25:5 in English
- King James Version (KJV)
- And Abraham gave all that he had unto Isaac.
- World English Bible (WEB)
- Abraham gave all that he had to Isaac,
- American Standard Version (ASV)
- And Abraham gave all that he had unto Isaac.
- Bible in Basic English (BBE)
- Now Abraham gave all his property to Isaac;
- Darby Translation (DBY)
- And Abraham gave all that he had to Isaac.
- Webster's Bible (WBS)
- And Abraham gave all that he had to Isaac.
- Young's Literal Translation (YLT)
- And Abraham giveth all that he hath to Isaac;
Read in context
- 3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
- 4ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
- 5ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
- 6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- 7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
Cross references
- Genesis 24:36 ಆದಿಕಾಂಡ 24:36ಇದಲ್ಲದೆ ನನ್ನ ಯಜಮಾನನ ಹೆಂಡತಿಯಾದ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Genesis 21:10–12 ಆದಿಕಾಂಡ 21:10–12ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು. ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು. ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
- John 3:35 ಯೋಹಾನನು 3:35ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Psalm 68:18 ಕೀರ್ತನೆಗಳು 68:18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Matthew 11:27 ಮತ್ತಾಯನು 11:27ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 1 Corinthians 3:21–23 1 ಕೊರಿಂಥದವರಿಗೆ 3:21–23ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು; ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು. ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- Romans 9:7–9 ರೋಮಾಪುರದವರಿಗೆ 9:7–9ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ. ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.