Genesis · chapter 27 · verse 28
Genesis 27:28 in Kannada
ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
Aadadarinda devaru ninage aakaashada manjannoo saaravulla bhoomiyannoo samruddhiyaada dhaanya draakshaarasavannoo kodali.
Genesis 27:28 in English
- King James Version (KJV)
- Therefore God give thee of the dew of heaven, and the fatness of the earth, and plenty of corn and wine:
- World English Bible (WEB)
- God give you of the dew of the sky, of the fatness of the earth, and plenty of grain and new wine.
- American Standard Version (ASV)
- And God give thee of the dew of heaven, And of the fatness of the earth, And plenty of grain and new wine:
- Bible in Basic English (BBE)
- May God give you the dew of heaven, and the good things of the earth, and grain and wine in full measure:
- Darby Translation (DBY)
- And God give thee of the dew of heaven, And of the fatness of the earth, And plenty of corn and new wine.
- Webster's Bible (WBS)
- Therefore God give thee of the dew of heaven, and the fatness of the earth, and plenty of corn and wine:
- Young's Literal Translation (YLT)
- and God doth give to thee of the dew of heaven, and of the fatness of the earth, and abundance of corn and wine;
Read in context
- 26ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.
- 27ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.
- 28ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
- 29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- 30ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.
Cross references
- Deuteronomy 33:28 ಧರ್ಮೋಪದೇಶಕಾಂಡ 33:28ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Deuteronomy 33:13 ಧರ್ಮೋಪದೇಶಕಾಂಡ 33:13ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
- Psalm 133:3 ಕೀರ್ತನೆಗಳು 133:3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- Hosea 14:5–7 ಹೋಶೇಯ 14:5–7ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು. ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು. ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Zechariah 8:12 ಜೆಕರ್ಯ 8:12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- Deuteronomy 7:13 ಧರ್ಮೋಪದೇಶಕಾಂಡ 7:13ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.
- 2 Samuel 1:21 2 ಸಮುವೇಲನು 1:21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.
- Joel 2:19 ಯೋವೇಲ 2:19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- Deuteronomy 32:2 ಧರ್ಮೋಪದೇಶಕಾಂಡ 32:2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
- Genesis 45:18 ಆದಿಕಾಂಡ 45:18ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
- Deuteronomy 11:11–12 ಧರ್ಮೋಪದೇಶಕಾಂಡ 11:11–12ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ; ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.