Genesis · chapter 27 · verse 4
Genesis 27:4 in Kannada
ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
Naanu preetimaaduva ruchiyaada ootavannoo siddha maadi takkondu baa. Aaga naanu saayuvadakkinta munche nanna praanavu ninnannu aasheervadisuva haage adannu ootamaaduvenu andanu.
Genesis 27:4 in English
- King James Version (KJV)
- And make me savoury meat, such as I love, and bring [it] to me, that I may eat; that my soul may bless thee before I die.
- World English Bible (WEB)
- Make me savory food, such as I love, and bring it to me, that I may eat, and that my soul may bless you before I die.”
- American Standard Version (ASV)
- and make me savory food, such as I love, and bring it to me, that I may eat; that my soul may bless thee before I die.
- Bible in Basic English (BBE)
- And make me food, good to the taste, such as is pleasing to me, and put it before me, so that I may have a meal and give you my blessing before death comes to me.
- Darby Translation (DBY)
- and prepare me a savoury dish such as I love, and bring it to me that I may eat, in order that my soul may bless thee before I die.
- Webster's Bible (WBS)
- And make me savory meat, such as I love, and bring [it] to me, that I may eat; that my soul may bless thee before I die.
- Young's Literal Translation (YLT)
- and make for me tasteful things, [such] as I have loved, and bring in to me, and I do eat, so that my soul doth bless thee before I die.'
Read in context
- 2ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
- 3ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
- 4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
- 5ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
- 6ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ--
Cross references
- Hebrews 11:20 ಇಬ್ರಿಯರಿಗೆ 11:20ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.
- Genesis 48:9 ಆದಿಕಾಂಡ 48:9ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು.
- Genesis 27:25 ಆದಿಕಾಂಡ 27:25ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
- Genesis 49:28 ಆದಿಕಾಂಡ 49:28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
- Luke 24:51 ಲೂಕನು 24:51ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.
- Joshua 22:6 ಯೆಹೋಶುವ 22:6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- Joshua 14:13 ಯೆಹೋಶುವ 14:13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- Genesis 27:7 ಆದಿಕಾಂಡ 27:7ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
- Genesis 48:15–20 ಆದಿಕಾಂಡ 48:15–20ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- Genesis 27:31 ಆದಿಕಾಂಡ 27:31ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
- Genesis 14:19 ಆದಿಕಾಂಡ 14:19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.