Genesis · chapter 28 · verse 1
Genesis 28:1 in Kannada
ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
Isaakanu yaakobanannu karedu aasheervadisi avanige aajnyaapisidde nandare--kaanaanyara kumaartegalalli neenu hendati yannu takkollabaaradu.
Genesis 28:1 in English
- King James Version (KJV)
- And Isaac called Jacob, and blessed him, and charged him, and said unto him, Thou shalt not take a wife of the daughters of Canaan.
- World English Bible (WEB)
- Isaac called Jacob, blessed him, and commanded him, “You shall not take a wife of the daughters of Canaan.
- American Standard Version (ASV)
- And Isaac called Jacob, and blessed him, and charged him, and said unto him, Thou shalt not take a wife of the daughters of Canaan.
- Bible in Basic English (BBE)
- Then Isaac sent for Jacob, and blessing him, said, Do not take a wife from among the women of Canaan;
- Darby Translation (DBY)
- And Isaac called Jacob, and blessed him, and charged him, and said to him, Thou shalt not take a wife of the daughters of Canaan.
- Webster's Bible (WBS)
- And Isaac called Jacob, and blessed him, and charged him, and said to him, Thou shalt not take a wife of the daughters of Canaan.
- Young's Literal Translation (YLT)
- And Isaac calleth unto Jacob, and blesseth him, and commandeth him, and saith to him, 'Thou dost not take a wife of the daughters of Caanan;
Read in context
- 1ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
- 2ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
- 3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
Cross references
- Genesis 28:3–4 ಆದಿಕಾಂಡ 28:3–4ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ, ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Genesis 27:46 ಆದಿಕಾಂಡ 27:46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
- 2 Corinthians 6:14–16 2 ಕೊರಿಂಥದವರಿಗೆ 6:14–16ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Genesis 26:34–35 ಆದಿಕಾಂಡ 26:34–35ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು. ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- Genesis 24:37 ಆದಿಕಾಂಡ 24:37ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
- Genesis 49:28 ಆದಿಕಾಂಡ 49:28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
- Genesis 27:27–33 ಆದಿಕಾಂಡ 27:27–33ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ. ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ. ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು. ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು. ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು. ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು. ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
- Exodus 34:15–16 ವಿಮೋಚನಕಾಂಡ 34:15–16ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- Joshua 22:7 ಯೆಹೋಶುವ 22:7ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--