Genesis · chapter 28 · verse 17
Genesis 28:17 in Kannada
ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
Avanu bhayapattu--ee sthalavu eshto bhayankara vaadaddu; idu devara maneye horatu bereyalla; ide paralokada baagilu andanu.
Genesis 28:17 in English
- King James Version (KJV)
- And he was afraid, and said, How dreadful [is] this place! this [is] none other but the house of God, and this [is] the gate of heaven.
- World English Bible (WEB)
- He was afraid, and said, “How awesome this place is! This is none other than God’s house, and this is the gate of heaven.”
- American Standard Version (ASV)
- And he was afraid, and said, How dreadful is this place! this is none other than the house of God, and this is the gate of heaven.
- Bible in Basic English (BBE)
- And fear came on him, and he said, This is a holy place; this is nothing less than the house of God and the doorway of heaven.
- Darby Translation (DBY)
- And he was afraid, and said, How dreadful is this place! this is none other but the house of God, and this is the gate of heaven.
- Webster's Bible (WBS)
- And he was afraid, and said, How dreadful [is] this place! this [is] no other but the house of God, and this [is] the gate of heaven.
- Young's Literal Translation (YLT)
- and he feareth, and saith, 'How fearful [is] this place; this is nothing but a house of God, and this a gate of the heavens.'
Read in context
- 15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- 16ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು.
- 17ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
- 18ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
- 19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
Cross references
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Genesis 35:1–13 ಆದಿಕಾಂಡ 35:1–13ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು. ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ; ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು. ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು. ತರುವಾಯ ಅವರು ಪ್ರಯಾಣ ವಾಗಿ ಹೊರಟರು. ಆಗ ದೇವರ ಭಯವು ಸುತ್ತಲಿರುವ ಪಟ್ಟಣಗಳವರ ಮೇಲೆ ಇದ್ದದರಿಂದ ಅವರು ಯಾಕೋ ಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ. ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನ ಸಹಿತವಾಗಿ ಕಾನಾನ್ ದೇಶದಲ್ಲಿರುವ ಲೂಜಿಗೆ ಬಂದನು, ಅದೇ ಬೇತೇಲ್. ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು. ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು. ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು. ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು. ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು. ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು. ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
- Ecclesiastes 5:1 ಪ್ರಸಂಗಿ 5:1ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Genesis 28:22 ಆದಿಕಾಂಡ 28:22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- 2 Chronicles 5:14 2 ಪೂರ್ವಕಾಲವೃತ್ತಾಂತ 5:14ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- Judges 13:22 ನ್ಯಾಯಸ್ಥಾಪಕರು 13:22ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
- Luke 2:9 ಲೂಕನು 2:9ಇಗೋ, ಕರ್ತನ ದೂತನು ಅವರ ಬಳಿಗೆ ಬಂದನು. ಆಗ ಕರ್ತನ ಮಹಿಮೆಯು ಅವರ ಸುತ್ತಮುತ್ತಲೂ ಪ್ರಕಾಶಿ ಸಿತು; ಆದದರಿಂದ ಅವರು ಬಹಳವಾಗಿ ಹೆದರಿದರು.
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Hebrews 10:21 ಇಬ್ರಿಯರಿಗೆ 10:21ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
- Matthew 17:6 ಮತ್ತಾಯನು 17:6ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.