Genesis · chapter 28 · verse 4
Genesis 28:4 in Kannada
ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
Devaru abrahaamanige kottiruva mattu neenu eega pravaasiyaagiruva deshavannu baadhyavaagi honduvante devaru ninnannu aasheervadisi ninagoo ninna santatigoo kodali andanu.
Genesis 28:4 in English
- King James Version (KJV)
- And give thee the blessing of Abraham, to thee, and to thy seed with thee; that thou mayest inherit the land wherein thou art a stranger, which God gave unto Abraham.
- World English Bible (WEB)
- and give you the blessing of Abraham, to you and to your offspring with you, that you may inherit the land where you travel, which God gave to Abraham.”
- American Standard Version (ASV)
- and give thee the blessing of Abraham, to thee, and to thy seed with thee; that thou mayest inherit the land of thy sojournings, which God gave unto Abraham.
- Bible in Basic English (BBE)
- And may God give you the blessing of Abraham, to you and to your seed, so that the land of your wanderings, which God gave to Abraham, may be your heritage.
- Darby Translation (DBY)
- And may he give thee the blessing of Abraham, to thee and to thy seed with thee, in order that thou mayest possess the land of thy sojourning, which God gave to Abraham!
- Webster's Bible (WBS)
- And give thee the blessing of Abraham, to thee, and to thy seed with thee; that thou mayest inherit the land in which thou art a stranger, which God gave to Abraham.
- Young's Literal Translation (YLT)
- and He doth give to thee the blessing of Abraham, to thee and to thy seed with thee, to cause thee to possess the land of thy sojournings, which God gave to Abraham.'
Read in context
- 2ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ.
- 3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
- 4ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- 5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
- 6ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ
Cross references
- Galatians 3:14 ಗಲಾತ್ಯದವರಿಗೆ 3:14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Genesis 17:6–8 ಆದಿಕಾಂಡ 17:6–8ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು. ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ. ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Genesis 15:5–7 ಆದಿಕಾಂಡ 15:5–7ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು. ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು. ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- Galatians 3:8 ಗಲಾತ್ಯದವರಿಗೆ 3:8ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
- Genesis 12:1–3 ಆದಿಕಾಂಡ 12:1–3ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Genesis 13:14–17 ಆದಿಕಾಂಡ 13:14–17ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು. ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು. ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Genesis 22:17–18 ಆದಿಕಾಂಡ 22:17–18ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Romans 4:7–8 ರೋಮಾಪುರದವರಿಗೆ 4:7–8ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು; ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.