Genesis · chapter 29 · verse 22
Genesis 29:22 in Kannada
ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
Aaga laabaananu aa sthalada manushyarannellaa koodisi autanavannu maadisidanu.
Genesis 29:22 in English
- King James Version (KJV)
- And Laban gathered together all the men of the place, and made a feast.
- World English Bible (WEB)
- Laban gathered together all the men of the place, and made a feast.
- American Standard Version (ASV)
- And Laban gathered together all the men of the place, and made a feast.
- Bible in Basic English (BBE)
- And Laban got together all the men of the place and gave a feast.
- Darby Translation (DBY)
- And Laban gathered together all the men of the place, and made a feast.
- Webster's Bible (WBS)
- And Laban assembled all the men of the place, and made a feast.
- Young's Literal Translation (YLT)
- and Laban gathereth all the men of the place, and maketh a banquet.
Read in context
- 20ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
- 21ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
- 22ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.
- 23ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
- 24ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಾಳನ್ನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.
Cross references
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- Matthew 22:2–10 ಮತ್ತಾಯನು 22:2–10ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು. ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು. ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು. ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ. ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
- Judges 14:10–18 ನ್ಯಾಯಸ್ಥಾಪಕರು 14:10–18ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು. ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು. ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು. ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು. ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು. ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು. ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು. ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು. ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
- Matthew 25:1–10 ಮತ್ತಾಯನು 25:1–10ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು. ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು. ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ, ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು. ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- Ruth 4:10–13 ರೂತಳು 4:10–13ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು. ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು. ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು. ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
- John 2:1–10 ಯೋಹಾನನು 2:1–10ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು. ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು. ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು. ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು. ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು. ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.