Genesis · chapter 29 · verse 30
Genesis 29:30 in Kannada
ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
Idallade avanu raahelala baligoo bandu leyaliginta raahelalannu hechchu preetimaadi innoo elu varusha avana baliyalli sevemaadidanu.
Genesis 29:30 in English
- King James Version (KJV)
- And he went in also unto Rachel, and he loved also Rachel more than Leah, and served with him yet seven other years.
- World English Bible (WEB)
- He went in also to Rachel, and he loved also Rachel more than Leah, and served with him seven more years.
- American Standard Version (ASV)
- And he went in also unto Rachel, and he loved also Rachel more than Leah, and served with him yet seven other years.
- Bible in Basic English (BBE)
- Then Jacob took Rachel as his wife, and his love for her was greater than his love for Leah; and he went on working for Laban for another seven years.
- Darby Translation (DBY)
- And he went in also to Rachel; and he loved also Rachel more than Leah. And he served with him yet seven other years.
- Webster's Bible (WBS)
- And he went in also to Rachel, and he loved also Rachel more than Leah, and served with him yet seven other years.
- Young's Literal Translation (YLT)
- And he goeth in also unto Rachel, and he also loveth Rachel more than Leah; and he serveth with him yet seven other years.
Read in context
- 28ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
- 29ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
- 30ಇದಲ್ಲದೆ ಅವನು ರಾಹೇಲಳ ಬಳಿಗೂ ಬಂದು ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಮಾಡಿ ಇನ್ನೂ ಏಳು ವರುಷ ಅವನ ಬಳಿಯಲ್ಲಿ ಸೇವೆಮಾಡಿದನು.
- 31ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
- 32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
Cross references
- Genesis 31:41 ಆದಿಕಾಂಡ 31:41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
- Genesis 44:27 ಆದಿಕಾಂಡ 44:27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
- Genesis 31:15 ಆದಿಕಾಂಡ 31:15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
- Genesis 29:20 ಆದಿಕಾಂಡ 29:20ಈ ಪ್ರಕಾರ ಯಾಕೋ ಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರುಷಗಳು ಅವನಿಗೆ ಸ್ವಲ್ಪ ದಿನಗಳಾಗಿ ತೋರಿದವು.
- Genesis 29:18 ಆದಿಕಾಂಡ 29:18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- 1 Samuel 18:17–27 1 ಸಮುವೇಲನು 18:17–27ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು. ದಾವೀದನು ಸೌಲನಿಗೆ--ಅರಸನಿಗೆ ಅಳಿಯನಾಗಿ ರುವದಕ್ಕೆ ನಾನೆಷ್ಟರವನು? ನನ್ನ ಜೀವನ ಏನು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರ ಅಂದನು. ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು. ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು. ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು. ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು. ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು. ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು. ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು. ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು. ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
- Deuteronomy 21:15 ಧರ್ಮೋಪದೇಶಕಾಂಡ 21:15ಒಬ್ಬ ಮನುಷ್ಯನಿಗೆ ಪ್ರೀತಿಮಾಡಲ್ಪಟ್ಟ ಒಬ್ಬಳೂ ಹಗೆಮಾಡಲ್ಪಟ್ಟ ಒಬ್ಬಳೂ ಇಬ್ಬರು ಪತ್ನಿಯರು ಇರ ಲಾಗಿ ಪ್ರೀತಿಮಾಡಲ್ಪಟ್ಟವಳೂ ಹಗೆಮಾಡಲ್ಪಟ್ಟವಳೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ ಹಗೆಮಾಡಲ್ಪಟ್ಟವಳ ಮಗನು ಚೊಚ್ಚಲಾಗಿದ್ದರೆ
- John 12:25 ಯೋಹಾನನು 12:25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
- Hosea 12:12 ಹೋಶೇಯ 12:12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- Genesis 30:25–26 ಆದಿಕಾಂಡ 30:25–26ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು. ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.