Genesis · chapter 29 · verse 35
Genesis 29:35 in Kannada
ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Aakeyu matte garbhiniyaagi maganannu hettu--eega naanu kartanannu stutisuvenu endu heli avanige yehoodanendu hesarittalu. Aakeyu heruvadu nintuhoyitu.
Genesis 29:35 in English
- King James Version (KJV)
- And she conceived again, and bare a son: and she said, Now will I praise the LORD: therefore she called his name Judah; and left bearing.
- World English Bible (WEB)
- She conceived again, and bore a son. She said, “This time I will praise the LORD.” Therefore she named him Judah. Then she stopped bearing.
- American Standard Version (ASV)
- And she conceived again, and bare a son: and she said, This time will I praise Jehovah: therefore she called his name Judah; and she left off bearing.
- Bible in Basic English (BBE)
- And she was with child again, and gave birth to a son: and she said, This time I will give praise to the Lord: so he was named Judah; after this she had no more children for a time.
- Darby Translation (DBY)
- And she again conceived, and bore a son, and said, This time will I praise Jehovah; therefore she called his name Judah. And she ceased to bear.
- Webster's Bible (WBS)
- And she conceived again, and bore a son: and she said, Now will I praise the LORD: therefore she called his name Judah, and left bearing.
- Young's Literal Translation (YLT)
- And she conceiveth again, and beareth a son, and saith this time, 'I praise Jehovah;' therefore hath she called his name Judah; and she ceaseth from bearing.
Read in context
- 33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
- 34ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- 35ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
Cross references
- Genesis 49:8–12 ಆದಿಕಾಂಡ 49:8–12ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- Matthew 1:2 ಮತ್ತಾಯನು 1:2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- 1 Chronicles 5:2 1 ಪೂರ್ವಕಾಲವೃತ್ತಾಂತ 5:2ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
- Genesis 43:8–9 ಆದಿಕಾಂಡ 43:8–9ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ--ಆ ಹುಡುಗ ನನ್ನು ನನ್ನ ಸಂಗಡ ಕಳುಹಿಸು; ನಾವು ಹೊರಟು ಹೋಗುವೆವು. ನಾವೂ ನೀನೂ ನಮ್ಮ ಮಕ್ಕಳೂ ಸಾಯದೆ ಬದುಕುವೆವು. ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Deuteronomy 33:7 ಧರ್ಮೋಪದೇಶಕಾಂಡ 33:7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
- Genesis 44:18–34 ಆದಿಕಾಂಡ 44:18–34ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು. ನನ್ನ ಒಡೆಯನು-- ನಿಮಗೆ ತಂದೆಯೂ ಸಹೋದರರೂ ಇದ್ದಾರೋ ಎಂದು ತನ್ನ ದಾಸರನ್ನು ಕೇಳಲು ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು. ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ, ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು. ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ. ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು. ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು. ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು. ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ. ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ. (ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು. ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು. ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ. ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು. ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- Genesis 38:1–30 ಆದಿಕಾಂಡ 38:1–30ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು. ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು. ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು. ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು. ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು. ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು. ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು. ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು. ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು. ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು. ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು. ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು. ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು. ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು. ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು. ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ. ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು. ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು. ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು. ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು. ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು. ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ. ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು. ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು. ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- Genesis 35:26 ಆದಿಕಾಂಡ 35:26ಲೇಯಳ ದಾಸಿ ಯಾದ ಜಿಲ್ಪಳ ಕುಮಾರರು: ಗಾದನು ಮತ್ತು ಆಶೇರನು. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬ ನಿಗೆ ಹುಟ್ಟಿದ ಕುಮಾರರು.