Genesis · chapter 3 · verse 24
Genesis 3:24 in Kannada
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Heege aatanu manushyanannu horage haaki jeevavrukshakke hoguva daariyannu kaayuvadakke eden totada poorvadikkinalli keroobiyarannoo ellaa kadeyalli suttuva jvaaleya kattiyannoo irisidanu.
Genesis 3:24 in English
- King James Version (KJV)
- So he drove out the man; and he placed at the east of the garden of Eden Cherubims, and a flaming sword which turned every way, to keep the way of the tree of life.
- World English Bible (WEB)
- So he drove out the man; and he placed cherubim at the east of the garden of Eden, and a flaming sword which turned every way, to guard the way to the tree of life.
- American Standard Version (ASV)
- So he drove out the man; and he placed at the east of the garden of Eden the Cherubim, and the flame of a sword which turned every way, to keep the way of the tree of life.
- Bible in Basic English (BBE)
- So he sent the man out; and at the east of the garden of Eden he put winged ones and a flaming sword turning every way to keep the way to the tree of life.
- Darby Translation (DBY)
- And he drove out Man; and he set the Cherubim, and the flame of the flashing sword, toward the east of the garden of Eden, to guard the way to the tree of life.
- Webster's Bible (WBS)
- So he drove out the man: and he placed at the east of the garden of Eden Cherubim, and a flaming sword which turned every way, to keep the way of the tree of life.
- Young's Literal Translation (YLT)
- yea, he casteth out the man, and causeth to dwell at the east of the garden of Eden the cherubs and the flame of the sword which is turning itself round to guard the way of the tree of life.
Read in context
- 22ಇದ ಲ್ಲದೆ ಕರ್ತನಾದ ದೇವರು--ಇಗೋ, ಮನುಷ್ಯನು ಒಳ್ಳೇದರ ಕೆಟ್ಟದರ ಭೇದವನ್ನು ತಿಳಿದು ನಮ್ಮಲ್ಲಿ ಒಬ್ಬನಂತಾದನು; ಈಗ ಅವನು ಕೈಚಾಚಿ ಜೀವವೃಕ್ಷದ ಫಲವನ್ನು ತೆಗೆದು ತಿಂದು ಎಂದೆಂದಿಗೂ ಬದುಕ ಬಾರದು ಅಂದನು.
- 23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- 24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
Cross references
- Hebrews 1:7 ಇಬ್ರಿಯರಿಗೆ 1:7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
- Psalm 104:4 ಕೀರ್ತನೆಗಳು 104:4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- Exodus 25:18–22 ವಿಮೋಚನಕಾಂಡ 25:18–22ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- 1 Chronicles 21:16–17 1 ಪೂರ್ವಕಾಲವೃತ್ತಾಂತ 21:16–17ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು. ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
- Hebrews 10:18–22 ಇಬ್ರಿಯರಿಗೆ 10:18–22ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ. ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Joshua 5:13 ಯೆಹೋಶುವ 5:13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Ezekiel 10:2–22 ಯೆಹೆಜ್ಕೇಲನು 10:2–22ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು. ಆ ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು. ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು. ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು. ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು. ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು. ಕೆಬಾರ್ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು. ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು. ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- Genesis 2:8–9 ಆದಿಕಾಂಡ 2:8–9ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು. ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Exodus 25:2 ವಿಮೋಚನಕಾಂಡ 25:2ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು.
Original words (Hebrew)
- out · H1644גָּרַשׁ gârash
- man · H120אָדָם ʼâdâm
- placed · H7931שָׁכַן shâkan
- east · H6924קֶדֶם qedem
- garden · H1588גַּן gan
- Eden · H5731עֵדֶן ʻÊden
- Cherubims · H3742כְּרוּב kᵉrûwb
- flaming · H3858לַהַט lahaṭ
- sword · H2719חֶרֶב chereb
- way · H2015הָפַךְ hâphak
- keep · H8104שָׁמַר shâmar
- way · H1870דֶּרֶךְ derek
- tree · H6086עֵץ ʻêts
- life · H2416חַי chay