Genesis · chapter 30 · verse 2
Genesis 30:2 in Kannada
ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
Adakke yaakobanu raahelala mele kopisi kondu--ninage garbha phalavannu kodada devara sthaanadalli naaniddeno andanu.
Genesis 30:2 in English
- King James Version (KJV)
- And Jacob’s anger was kindled against Rachel: and he said, [Am] I in God’s stead, who hath withheld from thee the fruit of the womb?
- World English Bible (WEB)
- Jacob’s anger burned against Rachel, and he said, “Am I in God’s place, who has withheld from you the fruit of the womb?”
- American Standard Version (ASV)
- And Jacob’s anger was kindled against Rachel: and he said, Am I in God’s stead, who hath withheld from thee the fruit of the womb?
- Bible in Basic English (BBE)
- But Jacob was angry with Rachel, and said, Am I in the place of God, who has kept your body from having fruit?
- Darby Translation (DBY)
- And Jacob's anger was kindled against Rachel, and he said, Am I in God's stead, who has withheld from thee the fruit of the womb?
- Webster's Bible (WBS)
- And Jacob's anger was kindled against Rachel; and he said, [Am] I in God's stead, who hath withheld from thee the fruit of the womb?
- Young's Literal Translation (YLT)
- And Jacob's anger burneth against Rachel, and he saith, 'Am I in stead of God who hath withheld from thee the fruit of the womb?'
Read in context
- 1ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
- 2ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.
- 3ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು.
- 4ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
Cross references
- Genesis 16:2 ಆದಿಕಾಂಡ 16:2ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- 2 Kings 5:7 2 ಅರಸುಗಳು 5:7ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು.
- Genesis 31:36 ಆದಿಕಾಂಡ 31:36ಆಗ ಯಾಕೋಬನು ಕೋಪಗೊಂಡು ಲಾಬಾ ನನ ಕೂಡ ವಾದಿಸಿದನು. ಯಾಕೋಬನು ಪ್ರತ್ಯುತ್ತರ ವಾಗಿ ಲಾಬಾನನಿಗೆ--ನೀನು ನನ್ನನ್ನು ಬೆನ್ನಟ್ಟಿ ಬರು ವದಕ್ಕೆ ನನ್ನ ಅಪರಾಧವೇನು? ನನ್ನ ಪಾಪವೇನು?
- Genesis 50:19 ಆದಿಕಾಂಡ 50:19ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
- 1 Samuel 1:5 1 ಸಮುವೇಲನು 1:5ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Genesis 20:18 ಆದಿಕಾಂಡ 20:18ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- 1 Samuel 2:5–6 1 ಸಮುವೇಲನು 2:5–6ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು. ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- Exodus 32:19 ವಿಮೋಚನಕಾಂಡ 32:19ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು