Genesis · chapter 30 · verse 24
Genesis 30:24 in Kannada
ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
Aakeyu--kartanu nanage mattobba maganannu koodisuvanendu heli avanige yosepha endu hesarittalu.
Genesis 30:24 in English
- King James Version (KJV)
- And she called his name Joseph; and said, The LORD shall add to me another son.
- World English Bible (WEB)
- She named him Joseph, saying, “May the LORD add another son to me.”
- American Standard Version (ASV)
- and she called his name Joseph, saying, Jehovah add to me another son.
- Bible in Basic English (BBE)
- And she gave him the name Joseph, saying, May the Lord give me another son.
- Darby Translation (DBY)
- And she called his name Joseph; and said, Jehovah will add to me another son.
- Webster's Bible (WBS)
- And she called his name Joseph; and said, The LORD will add to me another son.
- Young's Literal Translation (YLT)
- and she calleth his name Joseph, saying, 'Jehovah is adding to me another son.'
Read in context
- 22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
- 23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
- 24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
- 25ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
- 26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
Cross references
- Genesis 35:24 ಆದಿಕಾಂಡ 35:24ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
- Genesis 49:22–26 ಆದಿಕಾಂಡ 49:22–26ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ. ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ, ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.) ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- Genesis 37:2 ಆದಿಕಾಂಡ 37:2ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
- Revelation 7:8 ಪ್ರಕಟನೆ 7:8ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- Genesis 42:6 ಆದಿಕಾಂಡ 42:6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- Genesis 35:17–18 ಆದಿಕಾಂಡ 35:17–18ಆಕೆಯು ಹೆರಿಗೆ ಬೇನೆಯಿಂದ ಬಹು ಕಷ್ಟಪಡು ತ್ತಿರುವಾಗ ಸೂಲಗಿತ್ತಿಯು ಅವಳಿಗೆ--ಭಯಪಡ ಬೇಡ, ಗಂಡು ಮಗನನ್ನು ನೀನು ಪಡೆಯುವಿ ಅಂದಳು. (ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
- Genesis 39:1–23 ಆದಿಕಾಂಡ 39:1–23ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು. ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು. ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು. ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು. ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು. ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ. ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು. ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು. ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು. ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು. ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು; ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು. ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು. ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು. ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು. ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು. ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Hebrews 11:21–22 ಇಬ್ರಿಯರಿಗೆ 11:21–22ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
- Deuteronomy 33:13–17 ಧರ್ಮೋಪದೇಶಕಾಂಡ 33:13–17ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ. ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Acts 7:9–15 ಅಪೊಸ್ತಲರ ಕೃತ್ಯಗಳು 7:9–15ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು. ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ. ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು. ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು. ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
- Ezekiel 37:16 ಯೆಹೆಜ್ಕೇಲನು 37:16ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
- Genesis 37:4 ಆದಿಕಾಂಡ 37:4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.