Genesis · chapter 30 · verse 25
Genesis 30:25 in Kannada
ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
Raahelalu yosephanannu hettaaga yaakobanu laabaananige--naanu nanna sthalakkoo svadeshakkoo hoguva haage nannannu kaluhisi kodu.
Genesis 30:25 in English
- King James Version (KJV)
- And it came to pass, when Rachel had born Joseph, that Jacob said unto Laban, Send me away, that I may go unto mine own place, and to my country.
- World English Bible (WEB)
- When Rachel had borne Joseph, Jacob said to Laban, “Send me away, that I may go to my own place, and to my country.
- American Standard Version (ASV)
- And it came to pass, when Rachel had borne Joseph, that Jacob said unto Laban, Send me away, that I may go unto mine own place, and to my country.
- Bible in Basic English (BBE)
- Now after the birth of Joseph, Jacob said to Laban, Let me go away to my place and my country.
- Darby Translation (DBY)
- And it came to pass when Rachel had borne Joseph, that Jacob said to Laban, Send me away, that I may go to my place and to my country.
- Webster's Bible (WBS)
- And it came to pass, when Rachel had borne Joseph, that Jacob said to Laban, Send me away, that I may go to my own place, and to my country.
- Young's Literal Translation (YLT)
- And it cometh to pass, when Rachel hath borne Joseph, that Jacob saith unto Laban, 'Send me away, and I go unto my place, and to my land;
Read in context
- 23ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾನೆ ಅಂದಳು.
- 24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
- 25ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ--ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವ ಹಾಗೆ ನನ್ನನ್ನು ಕಳುಹಿಸಿ ಕೊಡು.
- 26ನಾನು ಯಾರಿಗೊಸ್ಕರ ನಿನಗೆ ಸೇವೆ ಮಾಡಿದೆನೋ ಆ ನನ್ನ ಹೆಂಡತಿಯರನ್ನೂ ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀ ಅಂದನು.
- 27ಲಾಬಾನನು ಅವನಿಗೆ--ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವನಾಗಿದ್ದರೆ ನನ್ನ ಬಳಿ ಯಲ್ಲಿಯೇ ಇರು. ಕರ್ತನು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾನೆಂದು ನಾನು ಅನುಭವದಿಂದ ಕಲಿತುಕೊಂಡಿದ್ದೇನೆ.
Cross references
- Genesis 24:54 ಆದಿಕಾಂಡ 24:54ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
- Genesis 24:56 ಆದಿಕಾಂಡ 24:56ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Genesis 31:13 ಆದಿಕಾಂಡ 31:13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- Genesis 31:55 ಆದಿಕಾಂಡ 31:55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Genesis 18:33 ಆದಿಕಾಂಡ 18:33ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Acts 7:4–5 ಅಪೊಸ್ತಲರ ಕೃತ್ಯಗಳು 7:4–5ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು. ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
- Genesis 24:6–7 ಆದಿಕಾಂಡ 24:6–7ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು. ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Genesis 27:44–45 ಆದಿಕಾಂಡ 27:44–45ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು. ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವ ವರೆಗೆ ಅಲ್ಲೇ ಇರು. ತರುವಾಯ ನಾನು ಕಳುಹಿಸಿ ನಿನ್ನನ್ನು ಅಲ್ಲಿಂದ ಕರೆಯಿಸುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನು ಕಳಕೊಳ್ಳುವದು ಯಾಕೆ ಅಂದಳು.ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
- Hebrews 11:15–16 ಇಬ್ರಿಯರಿಗೆ 11:15–16ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.