Genesis · chapter 31 · verse 40
Genesis 31:40 in Kannada
ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
Hagalalli bisili nindaloo irulalli chaliyindaloo baadhepattenu. Nidre nanna kannugalige tappihoyitu, ee sthitiyalli naaniddenu.
Genesis 31:40 in English
- King James Version (KJV)
- [Thus] I was; in the day the drought consumed me, and the frost by night; and my sleep departed from mine eyes.
- World English Bible (WEB)
- This was my situation: in the day the drought consumed me, and the frost by night; and my sleep fled from my eyes.
- American Standard Version (ASV)
- Thus I was; in the day the drought consumed me, and the frost by night; and my sleep fled from mine eyes.
- Bible in Basic English (BBE)
- This was my condition, wasted by heat in the day and by the bitter cold at night; and sleep went from my eyes.
- Darby Translation (DBY)
- Thus it was with me: in the day the heat consumed me, and the frost by night; and my sleep fled from mine eyes.
- Webster's Bible (WBS)
- [Thus] I was; in the day the drouth consumed me, and the frost by night; and my sleep departed from my eyes.
- Young's Literal Translation (YLT)
- I have been [thus]: in the day consumed me hath drought, and frost by night, and wander doth my sleep from mine eyes.
Read in context
- 38ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
- 39ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
- 40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
- 41ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
- 42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
Cross references
- Hosea 12:12 ಹೋಶೇಯ 12:12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- Luke 2:8 ಲೂಕನು 2:8ಆಗ ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
- Psalm 78:70–71 ಕೀರ್ತನೆಗಳು 78:70–71ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- 1 Peter 5:2–4 1 ಪೇತ್ರನು 5:2–4ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Exodus 2:19–22 ವಿಮೋಚನಕಾಂಡ 2:19–22ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು. ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು. ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು. ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.