Genesis · chapter 32 · verse 20
Genesis 32:20 in Kannada
ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
Idallade--ninna daasanaada yaakobanu namma hinde baruttaanendu helabeku endu aajnyaapisidanu. Yaakandare nanna munde hoguva kaanikeyinda avanannu samaadhaanapadisuvenu. Taruvaaya avana mukhavannu noduvenu; avanu nannannu angeekarisuvaneno endu andu kondanu.
Genesis 32:20 in English
- King James Version (KJV)
- And say ye moreover, Behold, thy servant Jacob [is] behind us. For he said, I will appease him with the present that goeth before me, and afterward I will see his face; peradventure he will accept of me.
- World English Bible (WEB)
- You shall say, ‘Not only that, but behold, your servant, Jacob, is behind us.’” For, he said, “I will appease him with the present that goes before me, and afterward I will see his face. Perhaps he will accept me.”
- American Standard Version (ASV)
- and ye shall say, Moreover, behold, thy servant Jacob is behind us. For he said, I will appease him with the present that goeth before me, and afterward I will see his face; peradventure he will accept me.
- Bible in Basic English (BBE)
- And you are to say further, Jacob, your servant, is coming after us. For he said to himself, I will take away his wrath by the offering which I have sent on, and then I will come before him: it may be that I will have grace in his eyes.
- Darby Translation (DBY)
- And, moreover, ye shall say, Behold, thy servant Jacob is behind us. For he said, I will propitiate him with the gift that goes before me, and afterwards I will see his face: perhaps he will accept me.
- Webster's Bible (WBS)
- And say ye moreover, Behold, thy servant Jacob [is] behind us. For he said, I will appease him with the present that goeth before me, and afterward I will see his face; peradventure he will accept of me.
- Young's Literal Translation (YLT)
- and ye have said also, Lo, thy servant Jacob [is] behind us;' for he said, 'I pacify his face with the present which is going before me, and afterwards I see his face; it may be he lifteth up my face;'
Read in context
- 18ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.
- 19ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
- 20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
- 21ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಗುಂಪಿನಲ್ಲಿ ಇಳುಕೊಂಡನು.
- 22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
Cross references
- Job 42:8–9 ಯೋಬನು 42:8–9ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ. ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
- Proverbs 21:14 ಜ್ಞಾನೋಕ್ತಿಗಳು 21:14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
- 1 Kings 20:31 1 ಅರಸುಗಳು 20:31ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
- 1 Samuel 6:5 1 ಸಮುವೇಲನು 6:5ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Proverbs 6:35 ಜ್ಞಾನೋಕ್ತಿಗಳು 6:35ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- 1 Samuel 25:17–35 1 ಸಮುವೇಲನು 25:17–35ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು. ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ. ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು. ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ. ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು. ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ. ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು. ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ. ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ. ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ. ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು. ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ; ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು. ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ. ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು. ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
- Proverbs 16:14 ಜ್ಞಾನೋಕ್ತಿಗಳು 16:14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು.
- Jonah 3:9 ಯೋನ 3:9ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
Original words (Hebrew)
- ye · H559אָמַר ʼâmar
- moreover · H1571גַּם gam
- servant · H5650עֶבֶד ʻebed
- Jacob · H3290יַעֲקֹב Yaʻăqôb
- us · H310אַחַר ʼachar
- said · H559אָמַר ʼâmar
- appease · H3722כָּפַר kâphar
- him · H6440פָּנִים pânîym
- present · H4503מִנְחָה minchâh
- goeth · H1980הָלַךְ hâlak
- me · H6440פָּנִים pânîym
- afterward · H310אַחַר ʼachar
- see · H7200רָאָה râʼâh
- face · H6440פָּנִים pânîym
- accept · H5375נָשָׂא nâsâʼ
- me · H6440פָּנִים pânîym