Genesis · chapter 32 · verse 30
Genesis 32:30 in Kannada
ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
Aaga yaakobanu--naanu devarannu mukhaamukhi yaagi nodidaroo nanna praanavu kaapaadalpattitu endu heli aa sthalakke peneeyel endu hesarittanu.
Genesis 32:30 in English
- King James Version (KJV)
- And Jacob called the name of the place Peniel: for I have seen God face to face, and my life is preserved.
- World English Bible (WEB)
- Jacob called the name of the place Peniel; for he said, “I have seen God face to face, and my life is preserved.”
- American Standard Version (ASV)
- And Jacob called the name of the place Peniel: for, [said he], I have seen God face to face, and my life is preserved.
- Bible in Basic English (BBE)
- And Jacob gave that place the name of Peniel, saying, I have seen God face to face, and still I am living.
- Darby Translation (DBY)
- And Jacob called the name of the place Peniel — For I have seen God face to face, and my life has been preserved.
- Webster's Bible (WBS)
- And Jacob called the name of the place Peniel: for I have seen God face to face, and my life is preserved.
- Young's Literal Translation (YLT)
- And Jacob calleth the name of the place Peniel: for 'I have seen God face unto face, and my life is delivered;'
Read in context
- 28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- 29ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
- 30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- 31ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
- 32ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
Cross references
- Numbers 12:8 ಅರಣ್ಯಕಾಂಡ 12:8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Exodus 24:10–11 ವಿಮೋಚನಕಾಂಡ 24:10–11ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು. ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- Deuteronomy 5:24 ಧರ್ಮೋಪದೇಶಕಾಂಡ 5:24ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ.
- Genesis 16:13 ಆದಿಕಾಂಡ 16:13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
- Exodus 33:19–23 ವಿಮೋಚನಕಾಂಡ 33:19–23ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು. ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು. ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ. ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು. ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Hebrews 11:27 ಇಬ್ರಿಯರಿಗೆ 11:27ನಂಬಿಕೆ ಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತ ದೇಶವನ್ನು ತೊರೆದುಬಿಟ್ಟನು. ಯಾಕಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.
- 2 Timothy 1:10 2 ತಿಮೊಥೆಯನಿಗೆ 1:10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
- Ephesians 1:17 ಎಫೆಸದವರಿಗೆ 1:17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
- Exodus 33:14 ವಿಮೋಚನಕಾಂಡ 33:14ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.