Genesis · chapter 33 · verse 11
Genesis 33:11 in Kannada
ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
Ninagoskara tandiruva nanna kaanikeyannu angeekarisabekendu beduttene. Yaakandare devaru nannondige krupeyinda vartisiddarinda nanage bekaadashtu ide endu heli avanannu balavanta maadiddarinda avanu adannu takkondanu.
Genesis 33:11 in English
- King James Version (KJV)
- Take, I pray thee, my blessing that is brought to thee; because God hath dealt graciously with me, and because I have enough. And he urged him, and he took [it].
- World English Bible (WEB)
- Please take the gift that I brought to you, because God has dealt graciously with me, and because I have enough.” He urged him, and he took it.
- American Standard Version (ASV)
- Take, I pray thee, my gift that is brought to thee; because God hath dealt graciously with me, and because I have enough. And he urged him, and he took it.
- Bible in Basic English (BBE)
- Take my offering then, with my blessing; for God has been very good to me and I have enough: so at his strong request, he took it.
- Darby Translation (DBY)
- Take, I pray thee, my blessing which has been brought to thee; because God has been gracious to me, and because I have everything. And he urged him, and he took [it].
- Webster's Bible (WBS)
- Take, I pray thee, my blessing that is brought to thee; because God hath dealt graciously with me, and because I have enough: and he urged him, and he took [it].
- Young's Literal Translation (YLT)
- receive, I pray thee, my blessing, which is brought to thee, because God hath favoured me, and because I have all [things];' and he presseth on him, and he receiveth,
Read in context
- 9ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
- 10ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
- 11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
- 12ತರುವಾಯ ಏಸಾವನು--ನಾವು ಮುಂದಕ್ಕೆ ಪ್ರಯಾಣ ಮಾಡುವಂತೆ ಹೊರಡೋಣ, ನಾನು ನಿನ್ನ ಮುಂದೆ ಹೋಗುವೆನು ಅಂದನು.
- 13ಅದಕ್ಕೆ ಯಾಕೋಬನು ಅವನಿಗೆ--ಮಕ್ಕಳು ಎಳೇ ಪ್ರಾಯದವರಾಗಿದ್ದಾರೆ. ಇದಲ್ಲದೆ ಎಳೇ ದನಕುರಿಗಳು ನನ್ನ ಬಳಿಯಲ್ಲಿರುವದು ನನ್ನ ಒಡೆಯನಿಗೆ ತಿಳಿದದೆ; ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಎಲ್ಲಾ ಮಂದೆಯು ಸತ್ತುಹೋದಾವು.
Cross references
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- 1 Samuel 25:27 1 ಸಮುವೇಲನು 25:27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
- Genesis 33:9 ಆದಿಕಾಂಡ 33:9ಅದಕ್ಕೆ ಏಸಾವನು--ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ ಅಂದನು.
- 2 Kings 5:23 2 ಅರಸುಗಳು 5:23ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು.
- Genesis 30:43 ಆದಿಕಾಂಡ 30:43ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
- Joshua 15:19 ಯೆಹೋಶುವ 15:19ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
- Romans 8:31–32 ರೋಮಾಪುರದವರಿಗೆ 8:31–32ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- 2 Kings 2:17 2 ಅರಸುಗಳು 2:17ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
- 1 Samuel 30:26 1 ಸಮುವೇಲನು 30:26ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.
- 2 Kings 5:15–16 2 ಅರಸುಗಳು 5:15–16ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು. ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- 1 Corinthians 3:21 1 ಕೊರಿಂಥದವರಿಗೆ 3:21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
- Genesis 32:13–20 ಆದಿಕಾಂಡ 32:13–20ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು. ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು; ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು; ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು. ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು. ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು. ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.