Genesis · chapter 34 · verse 14
Genesis 34:14 in Kannada
ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
Yaakobana makkalu avarige--naavu ee kaaryavannu maadalaarevu, sunnatiyillada manushyanige namma tangiyannu kodalaarevu, adu namage avamaana.
Genesis 34:14 in English
- King James Version (KJV)
- And they said unto them, We cannot do this thing, to give our sister to one that is uncircumcised; for that [were] a reproach unto us:
- World English Bible (WEB)
- and said to them, “We can’t do this thing, to give our sister to one who is uncircumcised; for that is a reproach to us.
- American Standard Version (ASV)
- and said unto them, We cannot do this thing, to give our sister to one that is uncircumcised; for that were a reproach unto us.
- Bible in Basic English (BBE)
- And they said, It is not possible for us to give our sister to one who is without circumcision, for that would be a cause of shame to us:
- Darby Translation (DBY)
- and said to them, We cannot do this, to give our sister to one that is uncircumcised; for that [were] a reproach to us.
- Webster's Bible (WBS)
- And they said to them, We cannot do this thing, to give our sister to one that is uncircumcised: for that [would be] a reproach to us:
- Young's Literal Translation (YLT)
- and say unto them, 'We are not able to do this thing, to give our sister to one who hath a foreskin: for it [is] a reproach to us.
Read in context
- 12ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
- 13ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
- 14ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
- 15ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
- 16ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
Cross references
- 1 Kings 21:9 1 ಅರಸುಗಳು 21:9ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
- Matthew 2:8 ಮತ್ತಾಯನು 2:8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
- 1 Samuel 17:36 1 ಸಮುವೇಲನು 17:36ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
- 2 Samuel 1:20 2 ಸಮುವೇಲನು 1:20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- Matthew 2:13 ಮತ್ತಾಯನು 2:13ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
- 2 Samuel 15:7 2 ಸಮುವೇಲನು 15:7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
- Genesis 17:11 ಆದಿಕಾಂಡ 17:11ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Romans 4:11 ರೋಮಾಪುರದವರಿಗೆ 4:11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.
- Matthew 23:1–39 ಮತ್ತಾಯನು 23:1–39ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ -- ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ; ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ. ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ. ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ. ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು. ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು. ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Joshua 5:2–9 ಯೆಹೋಶುವ 5:2–9ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು. ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು. ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು. ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ. ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು. ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು. ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು. ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು.