Genesis · chapter 34 · verse 23
Genesis 34:23 in Kannada
ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
Avara mandegaloo sampattoo danagalellaa nammavugalallavo? Avarige naavu oppikondare maatra avaru namma sangada vaasisuvaru andaru.
Genesis 34:23 in English
- King James Version (KJV)
- [Shall] not their cattle and their substance and every beast of theirs [be] ours? only let us consent unto them, and they will dwell with us.
- World English Bible (WEB)
- Won’t their livestock and their possessions and all their animals be ours? Only let’s give our consent to them, and they will dwell with us.”
- American Standard Version (ASV)
- Shall not their cattle and their substance and all their beasts be ours? only let us consent unto them, and they will dwell with us.
- Bible in Basic English (BBE)
- Then will not their cattle and their goods and all their beasts be ours? so let us come to an agreement with them so that they may go on living with us.
- Darby Translation (DBY)
- Their cattle, and their possessions, and every beast of theirs, shall they not be ours? only let us consent to them, and they will dwell with us.
- Webster's Bible (WBS)
- [Will] not their cattle, and their substance, and every beast of theirs [be] ours? only let us consent to them, and they will dwell with us.
- Young's Literal Translation (YLT)
- their cattle, and their substance, and all their beasts — are they not ours? only let us consent to them, and they dwell with us.'
Read in context
- 21ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
- 22ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
- 23ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
- 24ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
- 25ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
Cross references
- Proverbs 1:12–13 ಜ್ಞಾನೋಕ್ತಿಗಳು 1:12–13ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
- John 2:16 ಯೋಹಾನನು 2:16ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
- Proverbs 28:20 ಜ್ಞಾನೋಕ್ತಿಗಳು 28:20ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
- Acts 19:24–26 ಅಪೊಸ್ತಲರ ಕೃತ್ಯಗಳು 19:24–26ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು. ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ. ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
- 1 Timothy 6:6–10 1 ತಿಮೊಥೆಯನಿಗೆ 6:6–10ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಗೆ ಏನೂ ತಕ್ಕೊಂಡು ಬರಲಿಲ್ಲವಷ್ಟೆ; ನಿಶ್ಚಯವಾಗಿ ಅದರೊಳಗಿಂದ ಏನೂ ತಕ್ಕೊಂಡು ಹೋಗಲಾರೆವು. ಆದದರಿಂದ ಅನ್ನವಸ್ತ್ರಗಳುಳ್ಳವರಾಗಿ ಅವುಗಳಿಂದ ತೃಪ್ತರಾಗಿರೋಣ. ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Proverbs 23:4–5 ಜ್ಞಾನೋಕ್ತಿಗಳು 23:4–5ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು. ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- John 6:26–27 ಯೋಹಾನನು 6:26–27ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ. ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.