Genesis · chapter 34 · verse 27
Genesis 34:27 in Kannada
ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
Tamma sahodariyannu ashuddha maadiddarinda yaakobana makkalu kondavara balige bandu kollehodedaru.
Genesis 34:27 in English
- King James Version (KJV)
- The sons of Jacob came upon the slain, and spoiled the city, because they had defiled their sister.
- World English Bible (WEB)
- Jacob’s sons came on the dead, and plundered the city, because they had defiled their sister.
- American Standard Version (ASV)
- The sons of Jacob came upon the slain, and plundered the city, because they had defiled their sister.
- Bible in Basic English (BBE)
- And the sons of Jacob came on them when they were wounded and made waste the town because of what had been done to their sister;
- Darby Translation (DBY)
- The sons of Jacob came upon the slain, and plundered the city, because they had defiled their sister.
- Webster's Bible (WBS)
- The sons of Jacob came upon the slain, and spoiled the city; because they had defiled their sister.
- Young's Literal Translation (YLT)
- Jacob's sons have come in upon the wounded, and they spoil the city, because they had defiled their sister;
Read in context
- 25ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
- 26ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
- 27ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು.
- 28ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು.
- 29ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು.
Cross references
- Joshua 7:21 ಯೆಹೋಶುವ 7:21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
- Joshua 7:13 ಯೆಹೋಶುವ 7:13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- Esther 9:16 ಎಸ್ತೇರಳು 9:16ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
- Joshua 7:1 ಯೆಹೋಶುವ 7:1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Exodus 2:14 ವಿಮೋಚನಕಾಂಡ 2:14ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
- Genesis 34:31 ಆದಿಕಾಂಡ 34:31ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Esther 9:10 ಎಸ್ತೇರಳು 9:10ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
- Genesis 34:2 ಆದಿಕಾಂಡ 34:2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.