Genesis · chapter 35 · verse 11
Genesis 35:11 in Kannada
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
Devaru avanige heliddenandare--sarvashaktanaada devaru naane, neenu abhivruddhiyaagi hechchaagu; janaangavoo janaangagala gumpoo ninninda untaaguvavu; arasaru ninninda huttuvaru.
Genesis 35:11 in English
- King James Version (KJV)
- And God said unto him, I [am] God Almighty: be fruitful and multiply; a nation and a company of nations shall be of thee, and kings shall come out of thy loins;
- World English Bible (WEB)
- God said to him, “I am God Almighty. Be fruitful and multiply. A nation and a company of nations will be from you, and kings will come out of your body.
- American Standard Version (ASV)
- And God said unto him, I am God Almighty: be fruitful and multiply; a nation and a company of nations shall be of thee, and kings shall come out of thy loins;
- Bible in Basic English (BBE)
- And God said to him, I am God, the Ruler of all: be fertile, and have increase; a nation, truly a group of nations, will come from you, and kings will be your offspring;
- Darby Translation (DBY)
- And God said to him, I am the Almighty God: be fruitful and multiply; a nation and a company of nations shall be of thee; and kings shall come out of thy loins.
- Webster's Bible (WBS)
- And God said to him, I [am] God Almighty: be fruitful and multiply; a nation and a multitude of nations shall spring from thee, and kings shall come out of thy loins.
- Young's Literal Translation (YLT)
- And God saith to him, 'I [am] God Almighty; be fruitful and multiply, a nation and an assembly of nations is from thee, and kings from thy loins go out;
Read in context
- 9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
- 10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
- 11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
- 12ಇದಲ್ಲದೆ ಅಬ್ರಹಾಮನಿಗೂ ಇಸಾಕ ನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಆ ದೇಶವನ್ನು ಕೊಡುವೆನು ಅಂದನು.
- 13ಆಗ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಏರಿಹೋದನು.
Cross references
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Genesis 9:1 ಆದಿಕಾಂಡ 9:1ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Genesis 17:5–7 ಆದಿಕಾಂಡ 17:5–7ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ. ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು. ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Exodus 6:3 ವಿಮೋಚನಕಾಂಡ 6:3ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Genesis 17:16 ಆದಿಕಾಂಡ 17:16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
- Genesis 28:3–4 ಆದಿಕಾಂಡ 28:3–4ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ, ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Numbers 1:1–26 ಅರಣ್ಯಕಾಂಡ 1:1–26ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ-- ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ. ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ. ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು, ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ. ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು. ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು. ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು. ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು. ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು. ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Original words (Hebrew)
- God · H430אֱלֹהִים ʼĕlôhîym
- said · H559אָמַר ʼâmar
- God · H410אֵל ʼêl
- Almighty · H7706שַׁדַּי Shadday
- fruitful · H6509פָּרָה pârâh
- multiply · H7235רָבָה râbâh
- nation · H1471גּוֹי gôwy
- company · H6951קָהָל qâhâl
- nations · H1471גּוֹי gôwy
- kings · H4428מֶלֶךְ melek
- come · H3318יָצָא yâtsâʼ
- loins · H2504חָלָץ châlâts