Genesis · chapter 35 · verse 23
Genesis 35:23 in Kannada
ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
Avaralli leyala kumaararu: yaakobana chochchala maganaada roobenanu simeyonanu leviyu yehoodanu issaakaaranu mattu jebooloonanu.
Genesis 35:23 in English
- King James Version (KJV)
- The sons of Leah; Reuben, Jacob’s firstborn, and Simeon, and Levi, and Judah, and Issachar, and Zebulun:
- World English Bible (WEB)
- The sons of Leah: Reuben (Jacob’s firstborn), Simeon, Levi, Judah, Issachar, and Zebulun.
- American Standard Version (ASV)
- the sons of Leah: Reuben, Jacob’s first-born, and Simeon, and Levi, and Judah, and Issachar, and Zebulun;
- Bible in Basic English (BBE)
- Now Jacob had twelve sons: the sons of Leah: Reuben, Jacob's first son, and Simeon and Levi and Judah and Issachar and Zebulun;
- Darby Translation (DBY)
- The sons of Leah: Reuben — Jacob's firstborn — and Simeon, and Levi, and Judah, and Issachar, and Zebulun.
- Webster's Bible (WBS)
- The sons of Leah; Reuben, Jacob's first-born, and Simeon, and Levi, and Judah, and Issachar, and Zebulun:
- Young's Literal Translation (YLT)
- And the sons of Jacob are twelve. Sons of Leah: Jacob's first-born Reuben, and Simeon, and Levi, and Judah, and Issachar, and Zebulun.
Read in context
- 21ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
- 22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
- 23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
- 24ರಾಹೇಲಳ ಕುಮಾರರು: ಯೋಸೇಫನು ಮತ್ತು ಬೆನ್ಯಾವಿಾನನು.
- 25ರಾಹೇಲಳ ದಾಸಿಯಾದ ಬಿಲ್ಹಳ ಕುಮಾರರು: ದಾನನು ಮತ್ತು ನಫ್ತಾಲಿಯು.
Cross references
- Genesis 30:18–20 ಆದಿಕಾಂಡ 30:18–20ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು. ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು; ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
- Genesis 46:8–15 ಆದಿಕಾಂಡ 46:8–15ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು. ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು. ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು. ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು. ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು. ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು. ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು. ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- Genesis 29:32–35 ಆದಿಕಾಂಡ 29:32–35ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು. ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು. ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Exodus 1:2–4 ವಿಮೋಚನಕಾಂಡ 1:2–4ರೂಬೇನ್ ಸಿಮೆಯೋನ್ ಲೇವಿ ಯೆಹೂದ ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್ ದಾನ್ ನಫ್ತಾಲಿ ಗಾದ್ ಆಶೇರ್.
- Genesis 33:2 ಆದಿಕಾಂಡ 33:2ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.