Genesis · chapter 35 · verse 9
Genesis 35:9 in Kannada
ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
Yaakobanu paddan araamininda bandaaga devaru avanige innondu saari pratyakshanaagi avanannu aasheervadisidanu.
Genesis 35:9 in English
- King James Version (KJV)
- And God appeared unto Jacob again, when he came out of Padan-aram, and blessed him.
- World English Bible (WEB)
- God appeared to Jacob again, when he came from Paddan Aram, and blessed him.
- American Standard Version (ASV)
- And God appeared unto Jacob again, when he came from Paddan-aram, and blessed him.
- Bible in Basic English (BBE)
- Now when Jacob was on his way from Paddan-aram, God came to him again and, blessing him, said,
- Darby Translation (DBY)
- And God appeared to Jacob again after he had come from Padan-Aram, and blessed him.
- Webster's Bible (WBS)
- And God appeared to Jacob again when he came out of Padan-aram; and blessed him.
- Young's Literal Translation (YLT)
- And God appeareth unto Jacob again, in his coming from Padan-Aram, and blesseth him;
Read in context
- 7ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
- 8ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.
- 9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
- 10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
- 11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
Cross references
- Genesis 26:2 ಆದಿಕಾಂಡ 26:2ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
- Genesis 35:1 ಆದಿಕಾಂಡ 35:1ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
- Genesis 18:1 ಆದಿಕಾಂಡ 18:1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Genesis 32:24–30 ಆದಿಕಾಂಡ 32:24–30ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Jeremiah 31:3 ಯೆರೆಮೀಯ 31:3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- Genesis 31:11–13 ಆದಿಕಾಂಡ 31:11–13ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು. ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ. ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
- Genesis 32:1 ಆದಿಕಾಂಡ 32:1ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
- Genesis 31:3 ಆದಿಕಾಂಡ 31:3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Genesis 46:2–3 ಆದಿಕಾಂಡ 46:2–3ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು. ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
- Genesis 48:3–4 ಆದಿಕಾಂಡ 48:3–4ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು. ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.