Genesis · chapter 36 · verse 1
Genesis 36:1 in Kannada
ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
Edom emba esaavana vanshaavaligalu ive:
Genesis 36:1 in English
- King James Version (KJV)
- Now these [are] the generations of Esau, who [is] Edom.
- World English Bible (WEB)
- Now this is the history of the generations of Esau (that is, Edom).
- American Standard Version (ASV)
- Now these are the generations of Esau (the same is Edom).
- Bible in Basic English (BBE)
- Now these are the generations of Esau, that is to say, Edom.
- Darby Translation (DBY)
- And these are the generations of Esau, that is Edom.
- Webster's Bible (WBS)
- Now these [are] the generations of Esau, who [is] Edom.
- Young's Literal Translation (YLT)
- And these [are] births of Esau, who [is] Edom.
Read in context
- 1ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
- 2ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
- 3ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
Cross references
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- 1 Chronicles 1:35 1 ಪೂರ್ವಕಾಲವೃತ್ತಾಂತ 1:35ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- Deuteronomy 23:7 ಧರ್ಮೋಪದೇಶಕಾಂಡ 23:7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- Numbers 20:14–21 ಅರಣ್ಯಕಾಂಡ 20:14–21ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು. ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ. ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- Genesis 25:24–34 ಆದಿಕಾಂಡ 25:24–34ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು. ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು. ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು. ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು. ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು. ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು. ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು. ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು. ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು. ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು. ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- Genesis 27:35–41 ಆದಿಕಾಂಡ 27:35–41ಅವನು --ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತಕ್ಕೊಂಡಿದ್ದಾನೆ ಅಂದನು. ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು. ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು. ಏಸಾವನು ತನ್ನ ತಂದೆಗೆ--ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಹೌದು, ನನ್ನನ್ನೂ ಆಶೀರ್ವದಿಸು ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು. ಆಗ ಅವನ ತಂದೆಯಾದ ಇಸಾಕನು ಪ್ರತ್ಯುತ್ತರವಾಗಿ ಅವನಿಗೆ--ಇಗೋ, ನಿನ್ನ ನಿವಾಸವು ಭೂಮಿಯಸಾರ ದಿಂದಲೂ ಆಕಾಶದ ಮಂಜಿನಿಂದಲೂ ಇರುವದು. ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ. ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
- Genesis 32:3–7 ಆದಿಕಾಂಡ 32:3–7ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು; ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು. ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು. ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
- Ezekiel 25:12 ಯೆಹೆಜ್ಕೇಲನು 25:12ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.