Skip to content
ThuthiThuthiThuthi
Genesis · chapter 37 of 50 · 36 verses

Genesis 37 in Kannada

ಆದಿಕಾಂಡ 37

  1. ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್‌ ದೇಶದಲ್ಲಿ ವಾಸ ವಾಗಿದ್ದನು.

    And Jacob dwelt in the land wherein his father was a stranger, in the land of Canaan.

  2. ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.

    These [are] the generations of Jacob. Joseph, [being] seventeen years old, was feeding the flock with his brethren; and the lad [was] with the sons of Bilhah, and with the sons of Zilpah, his father’s wives: and Joseph brought unto his father their evil report.

  3. ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.

    Now Israel loved Joseph more than all his children, because he [was] the son of his old age: and he made him a coat of [many] colours.

  4. ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.

    And when his brethren saw that their father loved him more than all his brethren, they hated him, and could not speak peaceably unto him.

  5. ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.

    And Joseph dreamed a dream, and he told [it] his brethren: and they hated him yet the more.

  6. ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.

    And he said unto them, Hear, I pray you, this dream which I have dreamed:

  7. ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.

    For, behold, we [were] binding sheaves in the field, and, lo, my sheaf arose, and also stood upright; and, behold, your sheaves stood round about, and made obeisance to my sheaf.

  8. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.

    And his brethren said to him, Shalt thou indeed reign over us? or shalt thou indeed have dominion over us? And they hated him yet the more for his dreams, and for his words.

  9. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.

    And he dreamed yet another dream, and told it his brethren, and said, Behold, I have dreamed a dream more; and, behold, the sun and the moon and the eleven stars made obeisance to me.

  10. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.

    And he told [it] to his father, and to his brethren: and his father rebuked him, and said unto him, What [is] this dream that thou hast dreamed? Shall I and thy mother and thy brethren indeed come to bow down ourselves to thee to the earth?

  11. ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

    And his brethren envied him; but his father observed the saying.

  12. ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.

    And his brethren went to feed their father’s flock in Shechem.

  13. ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.

    And Israel said unto Joseph, Do not thy brethren feed [the flock] in Shechem? come, and I will send thee unto them. And he said to him, Here [am I].

  14. ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.

    And he said to him, Go, I pray thee, see whether it be well with thy brethren, and well with the flocks; and bring me word again. So he sent him out of the vale of Hebron, and he came to Shechem.

  15. ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು.

    And a certain man found him, and, behold, [he was] wandering in the field: and the man asked him, saying, What seekest thou?

  16. ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.

    And he said, I seek my brethren: tell me, I pray thee, where they feed [their flocks].

  17. ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.

    And the man said, They are departed hence; for I heard them say, Let us go to Dothan. And Joseph went after his brethren, and found them in Dothan.

  18. ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.

    And when they saw him afar off, even before he came near unto them, they conspired against him to slay him.

  19. ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ;

    And they said one to another, Behold, this dreamer cometh.

  20. ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

    Come now therefore, and let us slay him, and cast him into some pit, and we will say, Some evil beast hath devoured him: and we shall see what will become of his dreams.

  21. ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು.

    And Reuben heard [it], and he delivered him out of their hands; and said, Let us not kill him.

  22. ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.

    And Reuben said unto them, Shed no blood, [but] cast him into this pit that [is] in the wilderness, and lay no hand upon him; that he might rid him out of their hands, to deliver him to his father again.

  23. ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು.

    And it came to pass, when Joseph was come unto his brethren, that they stript Joseph out of his coat, [his] coat of [many] colours that [was] on him;

  24. ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು.

    And they took him, and cast him into a pit: and the pit [was] empty, [there was] no water in it.

  25. ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.

    And they sat down to eat bread: and they lifted up their eyes and looked, and, behold, a company of Ishmeelites came from Gilead with their camels bearing spicery and balm and myrrh, going to carry [it] down to Egypt.

  26. ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?

    And Judah said unto his brethren, What profit [is it] if we slay our brother, and conceal his blood?

  27. ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.

    Come, and let us sell him to the Ishmeelites, and let not our hand be upon him; for he [is] our brother [and] our flesh. And his brethren were content.

  28. ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.

    Then there passed by Midianites merchantmen; and they drew and lifted up Joseph out of the pit, and sold Joseph to the Ishmeelites for twenty [pieces] of silver: and they brought Joseph into Egypt.

  29. ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.

    And Reuben returned unto the pit; and, behold, Joseph [was] not in the pit; and he rent his clothes.

  30. ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.

    And he returned unto his brethren, and said, The child [is] not; and I, whither shall I go?

  31. ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ

    And they took Joseph’s coat, and killed a kid of the goats, and dipped the coat in the blood;

  32. ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.

    And they sent the coat of [many] colours, and they brought [it] to their father; and said, This have we found: know now whether it [be] thy son’s coat or no.

  33. ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು.

    And he knew it, and said, [It is] my son’s coat; an evil beast hath devoured him; Joseph is without doubt rent in pieces.

  34. ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.

    And Jacob rent his clothes, and put sackcloth upon his loins, and mourned for his son many days.

  35. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.

    And all his sons and all his daughters rose up to comfort him; but he refused to be comforted; and he said, For I will go down into the grave unto my son mourning. Thus his father wept for him.

  36. ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.

    And the Midianites sold him into Egypt unto Potiphar, an officer of Pharaoh’s, [and] captain of the guard.

All chapters of Genesis · Kannada Bible · Genesis 37 in Tamil

Kannada Bible: Kannada Old Version, public domain.

King James Version: public domain.