Genesis · chapter 37 · verse 27
Genesis 37:27 in Kannada
ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
Banniri, ishmaayelyarige avanannu maarona. Naavu avana mele kaihaakabaaradu. Yaakandare avanu namma sahodaranoo namma maansavoo aagiddaane andanu. Adakke avana sahodararu oppidaru.
Genesis 37:27 in English
- King James Version (KJV)
- Come, and let us sell him to the Ishmeelites, and let not our hand be upon him; for he [is] our brother [and] our flesh. And his brethren were content.
- World English Bible (WEB)
- Come, and let’s sell him to the Ishmaelites, and not let our hand be on him; for he is our brother, our flesh.” His brothers listened to him.
- American Standard Version (ASV)
- Come, and let us sell him to the Ishmaelites, and let not our hand be upon him; for he is our brother, our flesh. And his brethren hearkened unto him.
- Bible in Basic English (BBE)
- Let us give him to these Ishmaelites for a price, and let us not put violent hands on him, for he is our brother, our flesh. And his brothers gave ear to him.
- Darby Translation (DBY)
- Come and let us sell him to the Ishmaelites; but let not our hand be upon him; for he is our brother, our flesh. And his brethren hearkened [to him].
- Webster's Bible (WBS)
- Come, and let us sell him to the Ishmaelites, and let not our hand be upon him; for he [is] our brother, our flesh: and his brethren were content.
- Young's Literal Translation (YLT)
- Come, and we sell him to the Ishmaelites, and our hands are not on him, for he [is] our brother — our flesh;' and his brethren hearken.
Read in context
- 25ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
- 26ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು?
- 27ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
- 28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- 29ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು.
Cross references
- Genesis 42:21 ಆದಿಕಾಂಡ 42:21ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- 1 Samuel 18:17 1 ಸಮುವೇಲನು 18:17ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.
- Genesis 37:22 ಆದಿಕಾಂಡ 37:22ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು.
- 2 Samuel 11:14–17 2 ಸಮುವೇಲನು 11:14–17ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಊರೀಯನ ಕೈಯಲ್ಲಿ ಕಳುಹಿಸಿದನು. ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Exodus 21:21 ವಿಮೋಚನಕಾಂಡ 21:21ಆದರೂ ಅವನು ಒಂದೆರೆಡು ದಿನಗಳು ಉಳಿದರೆ ಶಿಕ್ಷೆಯಾಗಬಾರದು. ಅವನು ಅವನ ಸೊತ್ತು.
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- Nehemiah 5:8 ನೆಹೆಮೀಯ 5:8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.
- Genesis 29:14 ಆದಿಕಾಂಡ 29:14ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.
- Exodus 21:16 ವಿಮೋಚನಕಾಂಡ 21:16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.