Genesis · chapter 38 · verse 8
Genesis 38:8 in Kannada
ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
Aaga yehoodanu onaananige--ninna sahodarana hendatiya balige hogi avalannu maduveyaagi ninna annanige santatiyannu untu maadu andanu.
Genesis 38:8 in English
- King James Version (KJV)
- And Judah said unto Onan, Go in unto thy brother’s wife, and marry her, and raise up seed to thy brother.
- World English Bible (WEB)
- Judah said to Onan, “Go in to your brother’s wife, and perform the duty of a husband’s brother to her, and raise up offspring for your brother.”
- American Standard Version (ASV)
- And Judah said unto Onan, Go in unto thy brother’s wife, and perform the duty of a husband’s brother unto her, and raise up seed to thy brother.
- Bible in Basic English (BBE)
- Then Judah said to Onan, Go in to your brother's wife and do what it is right for a husband's brother to do; make her your wife and get offspring for your brother.
- Darby Translation (DBY)
- Then Judah said to Onan, Go in to thy brother's wife, and fulfil to her the brother-in-law's duty, and raise up seed to thy brother.
- Webster's Bible (WBS)
- And Judah said to Onan, Go in to thy brother's wife, and marry her, and raise up seed to thy brother.
- Young's Literal Translation (YLT)
- And Judah saith to Onan, 'Go in unto the wife of thy brother, and marry her, and raise up seed to thy brother;'
Read in context
- 6ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
- 7ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು.
- 8ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
- 9ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
- 10ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
Cross references
- Deuteronomy 25:5–10 ಧರ್ಮೋಪದೇಶಕಾಂಡ 25:5–10ಸಹೋದರರು ಕೂಡಿ ವಾಸಮಾಡುವಾಗ ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ ಆ ಸತ್ತವನ ಹೆಂಡತಿ ಮನೆ ಬಿಟ್ಟು ಅನ್ಯನ ಹೆಂಡತಿಯಾಗಬಾರದು; ಗಂಡನ ಸಹೋದರನು ಅವಳ ಬಳಿಗೆ ಬಂದು ಅವಳನ್ನು ಹೆಂಡತಿಯಾಗಿ ತಕ್ಕೊಂಡು ಗಂಡನ ಸಹೋದರನಿಗೆ ತಕ್ಕ ಹಾಗೆ ಅವಳಿಗೆ ನಡಿಸಬೇಕು. ಆಗ ಅವಳು ಹೆರುವ ಚೊಚ್ಚಲ ಮಗನು ಸತ್ತವನಾದ ಅವನ ಸಹೋದರನ ಹೆಸರಿಗೆ ಇವನ ಹೆಸರು ಇಸ್ರಾಯೇಲಿನಲ್ಲಿಂದ ಅಳಿಸಲ್ಪಡದ ಹಾಗೆ ನಿಲ್ಲಬೇಕು. ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತಕ್ಕೊಳ್ಳಲು ಮನಸ್ಸಿಲ್ಲದಿದ್ದರೆ ಅತ್ತಿಗೆಯು ಬಾಗಲಿನ ಬಳಿಗೆ ಹಿರಿಯರ ಹತ್ತಿರ ಬಂದು--ನನ್ನ ಗಂಡನ ಸಹೋದರನು ತನ್ನ ಸಹೋದರನಿಗೆ ಇಸ್ರಾಯೇಲಿನಲ್ಲಿ ಹೆಸರನ್ನು ಎಬ್ಬಿಸಲು ಮನಸ್ಸಿಲ್ಲದೆ ನನಗೆ ಗಂಡನ ಸಹೋದರನಾಗಿ ತನ್ನ ಕರ್ತವ್ಯವನ್ನು ನಡಿಸಲು ಮನಸ್ಸಿಲ್ಲದೆ ಇದ್ದಾನೆ ಎಂದು ಹೇಳಬೇಕು. ಆಗ ಪಟ್ಟಣದ ಹಿರಿಯರು ಅವನನ್ನು ಕರೆದು ಅವನ ಸಂಗಡ ಮಾತನಾಡಬೇಕು; ಅವನು--ಅವಳನ್ನು ತಕ್ಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ ವೆಂದು ಸಮರ್ಥಿಸಿದರೆ ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು. ಆ ಮೇಲೆ ಅವನಿಗೆ ಇಸ್ರಾಯೇಲಿನಲ್ಲಿ ಕೆರಬಿಡಿಸಿಕೊಂಡವನ ಮನೆ ಎಂದು ಹೆಸರಾಗಬೇಕು ಎಂದು ಹೇಳಬೇಕು.
- Matthew 22:23–27 ಮತ್ತಾಯನು 22:23–27ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು-- ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು. ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು. ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
- Ruth 4:5–11 ರೂತಳು 4:5–11ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು. ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು. ಹಾಗೆಯೇ ಆ ಬಂಧುವು ಬೋವಜನಿಗೆ--ನೀನು ನಿನಗೋಸ್ಕರ ಅದನ್ನು ಕೊಂಡುಕೋ ಎಂದು ತನ್ನ ಕೆರವನ್ನು ತೆಗೆದು ಹಾಕಿದನು. ಆಗ ಬೋವಜನು ಹಿರಿಯರಿಗೂ ಸಮಸ್ತ ಜನ ರಿಗೂ ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬ ದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು. ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು.
- Ruth 1:11 ರೂತಳು 1:11ಅದಕ್ಕೆ ನೊವೊಮಿಯು ನನ್ನ ಕುಮಾರ್ತೆಯರೇ, ನೀವು ಹಿಂತಿ ರುಗಿ ಹೋಗಿರಿ; ನನ್ನ ಸಂಗಡ ಯಾಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ನನ್ನ ಗರ್ಭದಲ್ಲಿ ನನಗೆ ಕುಮಾರರು ಇಲ್ಲವಲ್ಲಾ!
- Leviticus 18:16 ಯಾಜಕಕಾಂಡ 18:16ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ.
- Numbers 36:8–9 ಅರಣ್ಯಕಾಂಡ 36:8–9ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು. ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.