Genesis · chapter 39 · verse 12
Genesis 39:12 in Kannada
ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
Aaga aakeyu avana vastravannu hidukondu--nanna sangada malagu andalu. Aadare avanu tanna vastravannu avala kaiyalli bittu horage odihodanu.
Genesis 39:12 in English
- King James Version (KJV)
- And she caught him by his garment, saying, Lie with me: and he left his garment in her hand, and fled, and got him out.
- World English Bible (WEB)
- She caught him by his garment, saying, “Lie with me!” He left his garment in her hand, and ran outside.
- American Standard Version (ASV)
- And she caught him by his garment, saying, Lie with me: and he left his garment in her hand, and fled, and got him out.
- Bible in Basic English (BBE)
- And pulling at his coat, she said, Come to my bed; but slipping out of his coat, he went running away.
- Darby Translation (DBY)
- Then she caught him by his garment, saying, Lie with me! But he left his garment in her hand, and fled and ran out.
- Webster's Bible (WBS)
- And she caught him by his garment, saying, Lie with me: and he left his garment in her hand, and fled, and went out.
- Young's Literal Translation (YLT)
- and she catcheth him by his garment, saying, 'Lie with me;' and he leaveth his garment in her hand, and fleeth, and goeth without.
Read in context
- 10ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
- 11ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
- 12ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
- 13ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು
- 14ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು.
Cross references
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- Proverbs 7:13–27 ಜ್ಞಾನೋಕ್ತಿಗಳು 7:13–27ಹೀಗೆ ಅವಳು ಅವ ನನ್ನು--ಹಿಡುಕೊಂಡು ಮುದ್ದಿಟ್ಟು ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ. ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ. ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ. ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ. ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ. ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ. ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ. ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ. ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- Proverbs 6:5 ಜ್ಞಾನೋಕ್ತಿಗಳು 6:5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- 1 Peter 2:11 1 ಪೇತ್ರನು 2:11ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Proverbs 5:8 ಜ್ಞಾನೋಕ್ತಿಗಳು 5:8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
- Mark 14:51–52 ಮಾರ್ಕನು 14:51–52ಅಲ್ಲಿ ಒಬ್ಬಾನೊಬ್ಬ ಯೌವನಸ್ಥನು ಬರೀ ಮೈಮೇಲೆ ನಾರು ಬಟ್ಟೆಯನ್ನು ಹಾಕಿಕೊಂಡವನಾಗಿ ಆತನನ್ನು ಹಿಂಬಾಲಿಸುತ್ತಿರಲು ಯೌವನಸ್ಥರು ಅವನನ್ನು ಹಿಡಿದರು. ಆಗ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Genesis 39:8 ಆದಿಕಾಂಡ 39:8ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
- Genesis 39:10 ಆದಿಕಾಂಡ 39:10ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
- Ezekiel 16:30–31 ಯೆಹೆಜ್ಕೇಲನು 16:30–31ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
- Proverbs 1:15 ಜ್ಞಾನೋಕ್ತಿಗಳು 1:15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.