Genesis · chapter 39 · verse 2
Genesis 39:2 in Kannada
ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
Kartanu yosephana sangada idaddarinda avanu eligeyaagi aiguptadavanaada tanna yajamaanana maneyalli iddanu.
Genesis 39:2 in English
- King James Version (KJV)
- And the LORD was with Joseph, and he was a prosperous man; and he was in the house of his master the Egyptian.
- World English Bible (WEB)
- The LORD was with Joseph, and he was a prosperous man. He was in the house of his master the Egyptian.
- American Standard Version (ASV)
- And Jehovah was with Joseph, and he was a prosperous man; and he was in the house of his master the Egyptian.
- Bible in Basic English (BBE)
- And the Lord was with Joseph, and he did well; and he was living in the house of his master the Egyptian.
- Darby Translation (DBY)
- And Jehovah was with Joseph, and he was a prosperous man; and he was in the house of his master the Egyptian.
- Webster's Bible (WBS)
- And the LORD was with Joseph, and he was a prosperous man: and he was in the house of his master the Egyptian.
- Young's Literal Translation (YLT)
- And Jehovah is with Joseph, and he is a prosperous man, and he is in the house of his lord the Egyptian,
Read in context
- 1ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
- 2ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.
- 3ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.
- 4ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
Cross references
- 1 Samuel 18:14 1 ಸಮುವೇಲನು 18:14ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Jeremiah 15:20 ಯೆರೆಮೀಯ 15:20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Genesis 26:28 ಆದಿಕಾಂಡ 26:28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- Acts 7:9–10 ಅಪೊಸ್ತಲರ ಕೃತ್ಯಗಳು 7:9–10ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Genesis 21:22 ಆದಿಕಾಂಡ 21:22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Genesis 26:24 ಆದಿಕಾಂಡ 26:24ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
- Genesis 39:21–22 ಆದಿಕಾಂಡ 39:21–22ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು. ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.