Genesis · chapter 4 · verse 11
Genesis 4:11 in Kannada
ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
Aadadarinda eega ninna kaiyinda ninna sahodarana raktavannu kudiyuvadakke tanna baayannu tereda bhoomiya deseyinda neenu shapisalpattavanaadi.
Genesis 4:11 in English
- King James Version (KJV)
- And now [art] thou cursed from the earth, which hath opened her mouth to receive thy brother’s blood from thy hand;
- World English Bible (WEB)
- Now you are cursed because of the ground, which has opened its mouth to receive your brother’s blood from your hand.
- American Standard Version (ASV)
- And now cursed art thou from the ground, which hath opened its mouth to receive thy brother’s blood from thy hand;
- Bible in Basic English (BBE)
- And now you are cursed from the earth, whose mouth is open to take your brother's blood from your hand;
- Darby Translation (DBY)
- And now be thou cursed from the ground, which hath opened its mouth to receive thy brother's blood from thy hand.
- Webster's Bible (WBS)
- And now [art] thou cursed from the earth, which hath opened her mouth to receive thy brother's blood from thy hand;
- Young's Literal Translation (YLT)
- and now, cursed [art] thou from the ground, which hath opened her mouth to receive the blood of thy brother from thy hand;
Read in context
- 9ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
- 10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
- 11ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
- 12ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
- 13ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ.
Cross references
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- Job 16:18 ಯೋಬನು 16:18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- Deuteronomy 28:15–20 ಧರ್ಮೋಪದೇಶಕಾಂಡ 28:15–20ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
- Genesis 3:14 ಆದಿಕಾಂಡ 3:14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
- Job 31:38–40 ಯೋಬನು 31:38–40ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ, ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು. ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- Genesis 4:14 ಆದಿಕಾಂಡ 4:14ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
- Deuteronomy 29:19–21 ಧರ್ಮೋಪದೇಶಕಾಂಡ 29:19–21ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
- Revelation 12:16 ಪ್ರಕಟನೆ 12:16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Deuteronomy 27:16–26 ಧರ್ಮೋಪದೇಶಕಾಂಡ 27:16–26ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.