Genesis · chapter 4 · verse 3
Genesis 4:3 in Kannada
ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
Kaalaantaradalli sambhavisiddenandare, kaayi nanu holada phalavannu kartanige kaanikeyaagi tandanu.
Genesis 4:3 in English
- King James Version (KJV)
- And in process of time it came to pass, that Cain brought of the fruit of the ground an offering unto the LORD.
- World English Bible (WEB)
- As time passed, Cain brought an offering to the LORD from the fruit of the ground.
- American Standard Version (ASV)
- And in process of time it came to pass, that Cain brought of the fruit of the ground an offering unto Jehovah.
- Bible in Basic English (BBE)
- And after a time, Cain gave to the Lord an offering of the fruits of the earth.
- Darby Translation (DBY)
- And in process of time it came to pass that Cain brought of the fruit of the ground an offering to Jehovah.
- Webster's Bible (WBS)
- And in process of time it came to pass, that Cain brought of the fruit of the ground an offering to the LORD.
- Young's Literal Translation (YLT)
- And it cometh to pass at the end of days that Cain bringeth from the fruit of the ground a present to Jehovah;
Read in context
- 1ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
- 2ತರುವಾಯ ಆಕೆಯು ಅವನ ಸಹೋದರನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾ ದನು, ಕಾಯಿನನು ವ್ಯವಸಾಯಮಾಡುವವನಾದನು.
- 3ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
- 4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
- 5ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.
Cross references
- Numbers 18:12 ಅರಣ್ಯಕಾಂಡ 18:12ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
- Leviticus 2:1–11 ಯಾಜಕಕಾಂಡ 2:1–11ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು. ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು. ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು. ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು. ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.