Genesis · chapter 4 · verse 8
Genesis 4:8 in Kannada
ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
Aaga kaayinanu tanna sahodaranaada hebelana sangada maatanaadidanu; taruvaaya aadadde nandare, avaru holadalliddaaga kaayinanu tanna sahodaranaada hebelanige viruddhavaagi eddu avanannu konduhaakidanu.
Genesis 4:8 in English
- King James Version (KJV)
- And Cain talked with Abel his brother: and it came to pass, when they were in the field, that Cain rose up against Abel his brother, and slew him.
- World English Bible (WEB)
- Cain said to Abel, his brother, “Let’s go into the field.” While they were in the field, Cain rose up against Abel, his brother, and killed him.
- American Standard Version (ASV)
- And Cain told Abel his brother. And it came to pass, when they were in the field, that Cain rose up against Abel his brother, and slew him.
- Bible in Basic English (BBE)
- And Cain said to his brother, Let us go into the field: and when they were in the field, Cain made an attack on his brother Abel and put him to death.
- Darby Translation (DBY)
- And Cain spoke to Abel his brother, and it came to pass when they were in the field, that Cain rose up against Abel his brother, and slew him.
- Webster's Bible (WBS)
- And Cain talked with Abel his brother: and it came to pass when they were in the field, that Cain rose up against Abel his brother, and slew him.
- Young's Literal Translation (YLT)
- And Cain saith unto Abel his brother, ['Let us go into the field;'] and it cometh to pass in their being in the field, that Cain riseth up against Abel his brother, and slayeth him.
Read in context
- 6ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
- 7ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
- 8ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
- 9ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
- 10ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.
Cross references
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- 1 John 3:12–15 1 ಯೋಹಾನನು 3:12–15ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Proverbs 26:24–26 ಜ್ಞಾನೋಕ್ತಿಗಳು 26:24–26ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- Luke 11:51 ಲೂಕನು 11:51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 2 Samuel 14:6 2 ಸಮುವೇಲನು 14:6ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.
- Psalm 24:3–6 ಕೀರ್ತನೆಗಳು 24:3–6ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು? ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ. ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು. ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- Micah 7:6 ಮೀಕ 7:6ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು.
- 2 Samuel 13:26–28 2 ಸಮುವೇಲನು 13:26–28ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.