Genesis · chapter 40 · verse 8
Genesis 40:8 in Kannada
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
Avaru yosephanige--naavu kanasannu kandiddeve; aadare adara arthavannu namage heluvavarilla andaru. Yosephanu avarige artha heluvadu devaradallavo endu heli avugalannu nanage heliri andanu.
Genesis 40:8 in English
- King James Version (KJV)
- And they said unto him, We have dreamed a dream, and [there is] no interpreter of it. And Joseph said unto them, [Do] not interpretations [belong] to God? tell me [them], I pray you.
- World English Bible (WEB)
- They said to him, “We have dreamed a dream, and there is no one who can interpret it.” Joseph said to them, “Don’t interpretations belong to God? Please tell it to me.”
- American Standard Version (ASV)
- And they said unto him, We have dreamed a dream, and there is none that can interpret it. And Joseph said unto them, Do not interpretations belong to God? tell it me, I pray you.
- Bible in Basic English (BBE)
- Then they said to him, We have had a dream, and no one is able to give us the sense. And Joseph said, Does not the sense of dreams come from God? what was your dream?
- Darby Translation (DBY)
- And they said to him, We have dreamt a dream, and there is no interpreter of it. And Joseph said to them, [Do] not interpretations [belong] to God? tell me [your dreams], I pray you.
- Webster's Bible (WBS)
- And they said to him, We have dreamed a dream, and [there is] no interpreter of it. And Joseph said to them, [Do] not interpretations [belong] to God? tell me [them], I pray you.
- Young's Literal Translation (YLT)
- And they say unto him, 'A dream we have dreamed, and there is no interpreter of it;' and Joseph saith unto them, 'Are not interpretations with God? recount, I pray you, to me.'
Read in context
- 6ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ ಇಗೋ, ಅವರು ವ್ಯಸನವುಳ್ಳವರಾಗಿದ್ದರು.
- 7ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು--ನಿಮ್ಮ ಮುಖಗಳು ಇಂದು ವ್ಯಸನವುಳ್ಳವುಗಳಾಗಿರುವದು ಯಾಕೆ ಎಂದು ಕೇಳಿದನು.
- 8ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
- 9ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುವವನಾಗಿ ಅವನಿಗೆ--ನನ್ನ ಕನಸಿನಲ್ಲಿ ಇಗೋ, ನನ್ನ ಮುಂದೆ ಒಂದು ದ್ರಾಕ್ಷೇ ಬಳ್ಳಿಯಿತ್ತು.
- 10ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
Cross references
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- Genesis 41:15–16 ಆದಿಕಾಂಡ 41:15–16ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು. ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- 1 Corinthians 12:10–11 1 ಕೊರಿಂಥದವರಿಗೆ 12:10–11ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Daniel 5:11–15 ದಾನಿಯೇಲನು 5:11–15ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ; ದೇವ ರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ ವಿವೇಕವೂ ಬುದ್ಧಿಯೂ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ ಜ್ಯೋತಿಷ್ಯರಿಗೂ ಕಸ್ದೀಯರಿಗೂ ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು. ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು. ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ? ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ ಬೆಳಕೂ ಬುದ್ಧಿಯೂ ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ. ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
- Daniel 4:8 ದಾನಿಯೇಲನು 4:8ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
- Job 33:15–16 ಯೋಬನು 33:15–16ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- Daniel 2:11 ದಾನಿಯೇಲನು 2:11ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.