Genesis · chapter 41 · verse 14
Genesis 41:14 in Kannada
ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
Aaga pharohanu yosephanannu kare kaluhisidanu. Avaru avanannu tvareyaagi kaaraa gruhadinda horage tandaru. Avanu kshauramaadisi kondavanaagi tanna vastragalannu badalaayisi pharohana balige bandanu.
Genesis 41:14 in English
- King James Version (KJV)
- Then Pharaoh sent and called Joseph, and they brought him hastily out of the dungeon: and he shaved [himself], and changed his raiment, and came in unto Pharaoh.
- World English Bible (WEB)
- Then Pharaoh sent and called Joseph, and they brought him hastily out of the dungeon. He shaved himself, changed his clothing, and came in to Pharaoh.
- American Standard Version (ASV)
- Then Pharaoh sent and called Joseph, and they brought him hastily out of the dungeon: and he shaved himself, and changed his raiment, and came in unto Pharaoh.
- Bible in Basic English (BBE)
- Then Pharaoh sent for Joseph, and they took him quickly out of prison; and when his hair had been cut and his dress changed, he came before Pharaoh.
- Darby Translation (DBY)
- Then Pharaoh sent and called Joseph; and they brought him hastily out of the dungeon. And he shaved [himself], and changed his clothes, and came in to Pharaoh.
- Webster's Bible (WBS)
- Then Pharaoh sent and called Joseph, and they brought him hastily out of the dungeon: and he shaved [himself], and changed his raiment, and came before Pharaoh.
- Young's Literal Translation (YLT)
- And Pharaoh sendeth and calleth Joseph, and they cause him to run out of the pit, and he shaveth, and changeth his garments, and cometh in unto Pharaoh.
Read in context
- 12ಮೈಗಾವಲಿನ ಅಧಿಪತಿಗೆ ಸೇವಕ ನಾಗಿದ್ದ ಇಬ್ರಿಯನಾದ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.
- 13ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
- 14ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
- 15ಆಗ ಫರೋಹನು ಯೋಸೇಫನಿಗೆ--ನಾನು ಒಂದು ಕನಸನ್ನು ಕಂಡಿದ್ದೇನೆ; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು.
- 16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
Cross references
- Daniel 2:25 ದಾನಿಯೇಲನು 2:25ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Psalm 105:19–22 ಕೀರ್ತನೆಗಳು 105:19–22ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು. ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು. ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- 1 Samuel 2:7–8 1 ಸಮುವೇಲನು 2:7–8ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ. ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- 2 Kings 25:29 2 ಅರಸುಗಳು 25:29ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
- Esther 5:1 ಎಸ್ತೇರಳು 5:1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Jeremiah 52:32–33 ಯೆರೆಮೀಯ 52:32–33ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು. ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Exodus 10:16 ವಿಮೋಚನಕಾಂಡ 10:16ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
- Esther 4:1–4 ಎಸ್ತೇರಳು 4:1–4ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು. ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು. ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
- 2 Samuel 19:24 2 ಸಮುವೇಲನು 19:24ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.