Genesis · chapter 42 · verse 15
Genesis 42:15 in Kannada
ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
Neevu pareekshisalpaduvadu hegandare--nimma tammanannu illige taarada horatu pharohana jeevadaane neevu illinda horage hogabaaradu.
Genesis 42:15 in English
- King James Version (KJV)
- Hereby ye shall be proved: By the life of Pharaoh ye shall not go forth hence, except your youngest brother come hither.
- World English Bible (WEB)
- By this you shall be tested. By the life of Pharaoh, you shall not go out from here, unless your youngest brother comes here.
- American Standard Version (ASV)
- hereby ye shall be proved: by the life of Pharaoh ye shall not go forth hence, except your youngest brother come hither.
- Bible in Basic English (BBE)
- But in this way will you be put to the test: by the life of Pharaoh, you will not go away from this place till your youngest brother comes here.
- Darby Translation (DBY)
- By this ye shall be put to the proof: as Pharaoh lives, ye shall not go forth hence, unless your youngest brother come hither!
- Webster's Bible (WBS)
- By this ye shall be proved: By the life of Pharaoh ye shall not go forth hence, except your youngest brother shall come hither.
- Young's Literal Translation (YLT)
- by this ye are proved: Pharaoh liveth! if ye go out from this — except by your young brother coming hither;
Read in context
- 13ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
- 14ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ.
- 15ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು.
- 16ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
- 17ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.
Cross references
- 1 Samuel 17:55 1 ಸಮುವೇಲನು 17:55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
- Genesis 42:34 ಆದಿಕಾಂಡ 42:34ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.
- Genesis 42:20 ಆದಿಕಾಂಡ 42:20ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- Genesis 42:16 ಆದಿಕಾಂಡ 42:16ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
- Genesis 44:20–34 ಆದಿಕಾಂಡ 44:20–34ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು. ಅದಕ್ಕೆ ನೀನು ನಿನ್ನ ದಾಸರಿಗೆ--ನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ, ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು. ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ. ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು. ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು. ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು. ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ. ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ. (ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು. ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದೊಂದಿಗೆ ಬಂಧಿಸಲ್ಪಟ್ಟಿದ್ದರಿಂದ ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು. ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ. ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು. ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- Deuteronomy 6:13 ಧರ್ಮೋಪದೇಶಕಾಂಡ 6:13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
- Genesis 42:30 ಆದಿಕಾಂಡ 42:30ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು.
- Genesis 43:3 ಆದಿಕಾಂಡ 43:3ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
- Genesis 42:12 ಆದಿಕಾಂಡ 42:12ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
- Genesis 42:7 ಆದಿಕಾಂಡ 42:7ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು.