Genesis · chapter 43 · verse 30
Genesis 43:30 in Kannada
ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
Aaga yosephana karulu tanna tammana mele marugiddarinda avanu avasaradalli eddu aluvadakke sthalavannu huduki tanna koneyolage hogi alli attanu.
Genesis 43:30 in English
- King James Version (KJV)
- And Joseph made haste; for his bowels did yearn upon his brother: and he sought [where] to weep; and he entered into [his] chamber, and wept there.
- World English Bible (WEB)
- Joseph hurried, for his heart yearned over his brother; and he sought a place to weep. He entered into his room, and wept there.
- American Standard Version (ASV)
- And Joseph made haste; for his heart yearned over his brother: and he sought where to weep; and he entered into his chamber, and wept there.
- Bible in Basic English (BBE)
- Then Joseph's heart went out to his brother, and he went quickly into his room, for he was overcome with weeping.
- Darby Translation (DBY)
- And Joseph made haste, for his bowels burned for his brother; and he sought [a place] to weep, and he went into the chamber, and wept there.
- Webster's Bible (WBS)
- And Joseph made haste; for his bowels yearned towards his brother: and he sought [where] to weep; and he entered into [his] chamber, and wept there.
- Young's Literal Translation (YLT)
- And Joseph hasteth, for his bowels have been moved for his brother, and he seeketh to weep, and entereth the inner chamber, and weepeth there;
Read in context
- 28ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
- 29ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
- 30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
- 31ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು.
- 32ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
Cross references
- Genesis 42:24 ಆದಿಕಾಂಡ 42:24ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು..
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Genesis 45:14–15 ಆದಿಕಾಂಡ 45:14–15ಅವನು ತನ್ನ ತಮ್ಮನಾದ ಬೆನ್ಯಾವಿಾನನ ಕೊರಳನ್ನು ಅಪ್ಪಿ ಕೊಂಡು ಅತ್ತನು; ಬೆನ್ಯಾವಿಾನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- John 11:33–38 ಯೋಹಾನನು 11:33–38ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. ಯೇಸು ಅತ್ತನು. ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು. ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು. ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- Genesis 45:2 ಆದಿಕಾಂಡ 45:2ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ ಐಗುಪ್ತ್ಯರೂ ಫರೋಹನ ಮನೆಯವರೂ ಕೇಳಿಸಿಕೊಂಡರು.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
- 1 Kings 3:26 1 ಅರಸುಗಳು 3:26ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- 2 Timothy 1:4 2 ತಿಮೊಥೆಯನಿಗೆ 1:4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?