Genesis · chapter 45 · verse 8
Genesis 45:8 in Kannada
ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
Aadadarinda eega neevalla, devaru taane nannannu illige kaluhisiddaane. Aatanu nannannu pharohanige tandeyaagiyoo avana manegellaa yajamaananannaagiyoo aigupta deshakkellaa adhikaariyannaagiyoo maadiddaane.
Genesis 45:8 in English
- King James Version (KJV)
- So now [it was] not you [that] sent me hither, but God: and he hath made me a father to Pharaoh, and lord of all his house, and a ruler throughout all the land of Egypt.
- World English Bible (WEB)
- So now it wasn’t you who sent me here, but God, and he has made me a father to Pharaoh, lord of all his house, and ruler over all the land of Egypt.
- American Standard Version (ASV)
- So now it was not you that sent me hither, but God: and he hath made me a father to Pharaoh, and lord of all his house, and ruler over all the land of Egypt.
- Bible in Basic English (BBE)
- So now it was not you who sent me here, but God: and he has made me as a father to Pharaoh, and lord of all his house, and ruler over all the land of Egypt.
- Darby Translation (DBY)
- And now it was not you [that] sent me here, but God; and he has made me a father to Pharaoh, and lord of all his house, and governor over all the land of Egypt.
- Webster's Bible (WBS)
- So now [it was] not you [that] sent me hither, but God: and he hath made me a father to Pharaoh, and lord of all his house, and a ruler throughout all the land of Egypt.
- Young's Literal Translation (YLT)
- and now, ye — ye have not sent me hither, but God, and He doth set me for a father to Pharaoh, and for lord to all his house, and ruler over all the land of Egypt.
Read in context
- 6ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
- 7ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- 8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- 9ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
- 10ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
Cross references
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Romans 9:16 ರೋಮಾಪುರದವರಿಗೆ 9:16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Psalm 105:21–22 ಕೀರ್ತನೆಗಳು 105:21–22ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
- Judges 17:10 ನ್ಯಾಯಸ್ಥಾಪಕರು 17:10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
- Job 29:16 ಯೋಬನು 29:16ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- Genesis 41:39–48 ಆದಿಕಾಂಡ 41:39–48ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು. ಇದಲ್ಲದೆ ಫರೋಹನು ಯೋಸೇಫನಿಗೆ--ನೋಡು, ನಾನು ನಿನ್ನನ್ನು ಐಗುಪ್ತದೇಶದ ಮೇಲೆಲ್ಲಾ ನೇಮಿಸಿದ್ದೇನೆ ಅಂದನು. ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು. ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು. ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು. ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು. ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು. ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.
- Genesis 45:5 ಆದಿಕಾಂಡ 45:5ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.