Genesis · chapter 46 · verse 1
Genesis 46:1 in Kannada
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
Israayelanu tanagiddaddannellaa takkondu bershebakke bandu tanna tandeyaada isaakana devarige baligalannu arpisi danu.
Genesis 46:1 in English
- King James Version (KJV)
- And Israel took his journey with all that he had, and came to Beer-sheba, and offered sacrifices unto the God of his father Isaac.
- World English Bible (WEB)
- Israel traveled with all that he had, and came to Beersheba, and offered sacrifices to the God of his father, Isaac.
- American Standard Version (ASV)
- And Israel took his journey with all that he had, and came to Beer-sheba, and offered sacrifices unto the God of his father Isaac.
- Bible in Basic English (BBE)
- And Israel went on his journey with all he had, and came to Beer-sheba, where he made offerings to the God of his father Isaac.
- Darby Translation (DBY)
- And Israel took his journey with all that he had, and came to Beer-sheba; and he offered sacrifices to the God of his father Isaac.
- Webster's Bible (WBS)
- And Israel took his journey with all that he had, and came to Beer-sheba, and offered sacrifices to the God of his father Isaac.
- Young's Literal Translation (YLT)
- And Israel journeyeth, and all that he hath, and cometh in to Beer-Sheba, and sacrificeth sacrifices to the God of his father Isaac;
Read in context
- 1ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
- 2ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
- 3ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
Cross references
- Genesis 26:22–25 ಆದಿಕಾಂಡ 26:22–25ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು. ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು. ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು. ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
- Genesis 31:42 ಆದಿಕಾಂಡ 31:42ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.
- Genesis 28:13 ಆದಿಕಾಂಡ 28:13ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
- Genesis 28:10 ಆದಿಕಾಂಡ 28:10ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
- Genesis 21:33 ಆದಿಕಾಂಡ 21:33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
- Genesis 21:31 ಆದಿಕಾಂಡ 21:31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- Genesis 21:14 ಆದಿಕಾಂಡ 21:14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- Job 42:8 ಯೋಬನು 42:8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- Genesis 31:53 ಆದಿಕಾಂಡ 31:53ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
- Genesis 22:13 ಆದಿಕಾಂಡ 22:13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
- Genesis 4:4 ಆದಿಕಾಂಡ 4:4ಹೇಬೆಲನು ಸಹ ತನ್ನ ಮಂದೆಯಿಂದ ಕೊಬ್ಬಿದ ಚೊಚ್ಚಲಾದವುಗಳನ್ನು ತಂದನು. ಆಗ ಕರ್ತನು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಗೌರವಿಸಿದನು.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.