Genesis · chapter 46 · verse 10
Genesis 46:10 in Kannada
ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
Simeyonana makkalu: yemoovel yaaviాn ohad yaakeen chohar kaanaanyala maganaada saula embavaru.
Genesis 46:10 in English
- King James Version (KJV)
- And the sons of Simeon; Jemuel, and Jamin, and Ohad, and Jachin, and Zohar, and Shaul the son of a Canaanitish woman.
- World English Bible (WEB)
- The sons of Simeon: Jemuel, Jamin, Ohad, Jachin, Zohar, and Shaul the son of a Canaanite woman.
- American Standard Version (ASV)
- And the sons of Simeon: Jemuel, and Jamin, and Ohad, and Jachin, and Zohar, and Shaul the son of a Canaanitish woman.
- Bible in Basic English (BBE)
- And the sons of Simeon: Jemuel and Jamin and Ohad and Jachin and Zohar and Shaul, the son of a woman of Canaan;
- Darby Translation (DBY)
- — And the sons of Simeon: Jemuel, and Jamin, and Ohad, and Jachin, and Zohar, and Saul the son of a Canaanitish woman.
- Webster's Bible (WBS)
- And the sons of Simeon; Jemuel, and Jamin, and Ohad, and Jachin, and Zohar, and Shaul the son of a Canaanitish woman.
- Young's Literal Translation (YLT)
- And sons of Simeon: Jemuel, and Jamin, and Ohad, and Jachin, and Zohar, and Shaul son of the Canaanitess.
Read in context
- 8ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
- 9ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
- 10ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
- 11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- 12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
Cross references
- Exodus 6:15 ವಿಮೋಚನಕಾಂಡ 6:15ಸಿಮೆಯೋನನ ಕುಮಾರರು: ಯೆಮೂಯೇಲ್, ಯಾವಿಾನ್ ಓಹದ್ ಯಾಕೀನ್ ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.
- Genesis 29:33 ಆದಿಕಾಂಡ 29:33ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
- 1 Chronicles 4:24–43 1 ಪೂರ್ವಕಾಲವೃತ್ತಾಂತ 4:24–43ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು. ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು. ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ. ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ. ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ ಹಚರ್ ಷೂವಾಲ್ತ್ನಲ್ಲಿಯೂ ಬಿಲ್ಹದಲ್ಲಿಯೂ ಏಚೆಮನ ಲ್ಲಿಯೂ ತೋಲಾದಿನಲ್ಲಿಯೂ ಬೆತುವೇಲಿನ ಲ್ಲಿಯೂ ಹೊರ್ಮದಲ್ಲಿಯೂ ಚಿಕ್ಲಗಿನಲ್ಲಿಯೂ ಬೇತ್ಮರ್ಕಾಬೋತ್ದಲ್ಲಿಯೂ ಹಚರ್ ಸೂಸೀಮ ದಲ್ಲಿಯೂ ಬೇತ್ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು. ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು. ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳದ ವರೆಗೂ ಅವರಿಗೆ ಇದ್ದವು. ಇವೇ ಅವರು ವಾಸವಾಗಿರುವ ಸ್ಥಳಗಳೂ ಅವರ ವಂಶಾವಳಿಗಳೂ. ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು, ಯೋವೇಲನು. ಅಸಿ ಯೇಲನ ಮಗನಾದ ಸೆರಾಯನ ಮಗನಾದ ಯೊಷಿಬ್ಯನ ಮಗನಾದ ಯೇಹೂ. ಎಲ್ಯೋವೇನೈ, ಯಾಕೋಬನು, ಯೆಷೋಹಾಯನು, ಅಸಾಯನು, ಅದೀಯೇಲನು, ಯೆಸೀಮಿಯೇಲನು, ಬೆನಾಯನು. ಶೆಮಾಯನ ಮಗನಾದ ಶಿಮ್ರಿಯ ಮಗನಾದ ಯೆದಾಯನ ಮಗನಾದ ಅಲ್ಲೋನನ ಮಗನಾದ ಶಿಪ್ಫಿಯ ಮಗನಾದ ಜೀಜನು. ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ತಮ್ಮ ಸಂತತಿಗಳಲ್ಲಿ ಪ್ರಭುಗಳಾಗಿದ್ದರು; ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು. ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು. ಅವರು ರಸವತ್ತಾದ ಒಳ್ಳೇ ಮೇವನ್ನು ಕಂಡು ಕೊಂಡರು. ಆ ದೇಶವು ವಿಸ್ತಾರವಾಗಿಯೂ ಶಾಂತ ವಾಗಿಯೂ ಸಮಾಧಾನವಾಗಿಯೂ ಇತ್ತು; ಪೂರ್ವ ದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು. ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ. ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ. ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
- Numbers 26:12–13 ಅರಣ್ಯಕಾಂಡ 26:12–13ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ; ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.
- Genesis 28:1 ಆದಿಕಾಂಡ 28:1ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
- Numbers 1:6 ಅರಣ್ಯಕಾಂಡ 1:6ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್,
- 1 Chronicles 2:1 1 ಪೂರ್ವಕಾಲವೃತ್ತಾಂತ 2:1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Genesis 49:5–7 ಆದಿಕಾಂಡ 49:5–7ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- Genesis 34:25 ಆದಿಕಾಂಡ 34:25ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
- Numbers 1:22–23 ಅರಣ್ಯಕಾಂಡ 1:22–23ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
- Numbers 2:12–13 ಅರಣ್ಯಕಾಂಡ 2:12–13ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.