Genesis · chapter 46 · verse 11
Genesis 46:11 in Kannada
ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
Leviya makkalu: gershon kehaat meraaree embavaru.
Genesis 46:11 in English
- King James Version (KJV)
- And the sons of Levi; Gershon, Kohath, and Merari.
- World English Bible (WEB)
- The sons of Levi: Gershon, Kohath, and Merari.
- American Standard Version (ASV)
- And the sons of Levi: Gershon, Kohath, and Merari.
- Bible in Basic English (BBE)
- And the sons of Levi: Gershon, Kohath, and Merari;
- Darby Translation (DBY)
- — And the sons of Levi: Gershon, Kohath, and Merari.
- Webster's Bible (WBS)
- And the sons of Levi; Gershon, Kohath, and Merari.
- Young's Literal Translation (YLT)
- And sons of Levi: Gershon, Kohath, and Merari.
Read in context
- 9ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು.
- 10ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು.
- 11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- 12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- 13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
Cross references
- Genesis 29:34 ಆದಿಕಾಂಡ 29:34ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Numbers 4:1–49 ಅರಣ್ಯಕಾಂಡ 4:1–49ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ -- ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ. ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು. ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ. ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು. ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು. ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ-- ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು. ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು. ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ. ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು. ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು. ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು. ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು. ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ. ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು. ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ. ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು; ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು. ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ. ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು. ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
- 1 Chronicles 22:1–19 1 ಪೂರ್ವಕಾಲವೃತ್ತಾಂತ 22:1–19ಆಗ ದಾವೀದನು -- ಕರ್ತನಾದ ದೇವರ ಮನೆಯೂ ಇಸ್ರಾಯೇಲಿನ ದಹನಬಲಿ ಪೀಠವೂ ಇದೇ ಅಂದನು. ದಾವೀದನು ಇಸ್ರಾಯೇಲಿನ ದೇಶದಲ್ಲಿರುವ ಪರ ದೇಶಸ್ಥರನ್ನು ಕೂಡಿಸಲು ಹೇಳಿ ದೇವರ ಮನೆಯನ್ನು ಕಟ್ಟಿಸುವದಕ್ಕೆ ಕೆತ್ತನೆ ಕಲ್ಲುಗಳನ್ನು ಕಡಿಯುವ ಹಾಗೆ ಕುಟಿಗರನ್ನು ನೇಮಿಸಿದನು. ಇದಲ್ಲದೆ ದಾವೀದನು ಬಾಗಲುಗಳ ಕದಗಳನ್ನು ಜೋಡಿಸುವದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಹೆಚ್ಚಾದ ಕಬ್ಬಿಣವನ್ನೂ ಲೆಕ್ಕವಿಲ್ಲ ದಷ್ಟು ಹೆಚ್ಚಾದ ತಾಮ್ರವನ್ನೂ ಸಿದ್ಧಮಾಡಿಸಿದನು; ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿ ಸಿದನು; ಚೀದೋನ್ಯರೂ ತೂರ್ಯರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು. ಇದ ಲ್ಲದೆ ದಾವೀದನು--ನನ್ನ ಮಗನಾದ ಸೊಲೊಮೋ ನನು ಹುಡುಗನಾಗಿಯೂ ಮೃದುವಾದವನಾಗಿಯೂ ಇದ್ದಾನೆ; ಕರ್ತನಿಗೆ ಕಟ್ಟಬೇಕಾದ ಮನೆಯೂ ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ ಸೌಂದರ್ಯದ ಲ್ಲಿಯೂ ಅಧಿಕ ಘನವಾಗಿರಬೇಕು; ನಾನು ಅದ ಕ್ಕೋಸ್ಕರ ಈಗ ಸಿದ್ಧಮಾಡುವೆನೆಂದು ಹೇಳಿದನು. ಆದದರಿಂದ ದಾವೀದನು ಸಾಯುವದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು. ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು. ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು. ಆದರೆ ಕರ್ತ ನಿಂದ ನನಗುಂಟಾದ ವಾಕ್ಯವೇನಂದರೆ--ನೀನು ಬಹು ರಕ್ತವನ್ನು ಚೆಲ್ಲಿದ್ದೀ; ಮಹಾಯುದ್ಧಗಳನ್ನು ಮಾಡಿದ್ದೀ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ; ಯಾಕಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಸುರಿಸಿದ್ದಿ. ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು. ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು. ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ. ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ. ಇಗೋ, ನನ್ನ ಕಷ್ಟ ಸ್ಥಿತಿಯಲ್ಲಿ ನಾನು ಕರ್ತನ ಮನೆಗೋಸ್ಕರ ಒಂದು ಲಕ್ಷ ಬಂಗಾ ರದ ತಲಾಂತುಗಳನ್ನೂ ಹತ್ತು ಲಕ್ಷ ಬೆಳ್ಳಿಯ ತಲಾಂತು ಗಳನ್ನೂ ಲೆಕ್ಕವಿಲ್ಲದಷ್ಟು ತಾಮ್ರವನ್ನೂ ಕಬ್ಬಿಣವನ್ನೂ ಸಿದ್ಧಮಾಡಿದ್ದೇನೆ; ಅದು ಬಹಳವಾಯಿತು. ಹಾಗೆಯೇ ಮರಗಳನ್ನೂ ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಹೆಚ್ಚಾಗಿ ಸೇರಿಸಬಹುದು. ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ ಕಲ್ಲು ಕೆಲಸದವರೂ ಕಲ್ಲು ಕುಟಿಗರೂ ಬಡಿಗಿಯವರೂ ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ. ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ-- ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಇಲ್ಲವೋ? ಎಲ್ಲಾ ಕಡೆಯಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾನ ಲ್ಲವೋ? ನಿಶ್ಚಯವಾಗಿ ಆತನು ದೇಶನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ ದೇಶವು ಕರ್ತನ ಮುಂದೆಯೂ ತನ್ನ ಜನರ ಮುಂದೆಯೂ ಸ್ವಾಧೀನ ವಾಯಿತು.ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು. ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- Numbers 26:57–58 ಅರಣ್ಯಕಾಂಡ 26:57–58ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ. ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ;
- Numbers 3:17–22 ಅರಣ್ಯಕಾಂಡ 3:17–22ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನನೂ ಕೆಹಾತನೂ ಮೆರಾರೀಯೂ. ಗೇರ್ಷೋನನ ಕುಮಾರರ ಹೆಸರುಗಳು ತಮ್ಮ ಕುಟುಂಬಗಳ ಪ್ರಕಾರ ಇವೇ; ಲಿಬ್ನೀಯೂ ಶಿಮ್ಮಿಯೂ. ಕೆಹಾತನ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಅಮ್ರಾಮನೂ ಇಚ್ಹಾರನೂ ಹೆಬ್ರೋನನೂ ಉಜ್ಜೀಯೇಲನೂ. ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ. ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ. ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.
- Genesis 49:5–7 ಆದಿಕಾಂಡ 49:5–7ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- 1 Chronicles 2:11 1 ಪೂರ್ವಕಾಲವೃತ್ತಾಂತ 2:11ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.
- Deuteronomy 33:8–11 ಧರ್ಮೋಪದೇಶಕಾಂಡ 33:8–11ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು; ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
- 1 Chronicles 2:16 1 ಪೂರ್ವಕಾಲವೃತ್ತಾಂತ 2:16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
- 1 Chronicles 6:1–3 1 ಪೂರ್ವಕಾಲವೃತ್ತಾಂತ 6:1–3ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು. ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು. ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.
- 1 Chronicles 2:1 1 ಪೂರ್ವಕಾಲವೃತ್ತಾಂತ 2:1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
- Numbers 8:1–26 ಅರಣ್ಯಕಾಂಡ 8:1–26ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು. ಆರೋನನು ಹಾಗೆಯೇ ಮಾಡಿ ದೀಪಸ್ತಂಭಕ್ಕೆ ಎದುರಾಗಿ ಅದರ ದೀಪಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು. ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು. ಅವರನ್ನು ಶುದ್ಧಮಾಡುವದಕ್ಕೆ ಅವರಿಗೆ ಮಾಡಬೇಕಾದದ್ದೇನಂದರೆ--ಶುದ್ಧಿಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಆಗ ಅವರು ತಮ್ಮ ಶರೀರವನ್ನೆಲ್ಲಾ ಕ್ಷೌರಮಾಡಿಸಿಕೊಂಡು ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧಮಾಡಿಕೊಳ್ಳುವಂತೆ ಮಾಡು. ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ. ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು. ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು. ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು. ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು. ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು. ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು. ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು. ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ. ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಚೊಚ್ಚಲಾದವುಗಳಿಗೋಸ್ಕರ ಲೇವಿಯರನ್ನು ನಾನು ತೆಗೆದುಕೊಂಡೆನು. ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ. ಮೋಶೆಗೆ ಲೇವಿಯರ ವಿಷಯದಲ್ಲಿ ಕರ್ತನು ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯೂ ಲೇವಿಯರಿಗೆ ಮಾಡಿದರು, ಇಸ್ರಾಯೇಲ್ ಮಕ್ಕಳು ಅವರಿಗೆ ಹಾಗೆಯೇ ಮಾಡಿದರು. ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು. ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು. ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.