Genesis · chapter 46 · verse 15
Genesis 46:15 in Kannada
ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
Ivaru leyala makkalu. Aakeyu ivarannoo tanna magalaada deenalannoo paddan araaminalli yaakobanige hettalu. Avana kumaararoo kumaarteyaroo ellaa moovattu mooru mandi.
Genesis 46:15 in English
- King James Version (KJV)
- These [be] the sons of Leah, which she bare unto Jacob in Padan-aram, with his daughter Dinah: all the souls of his sons and his daughters [were] thirty and three.
- World English Bible (WEB)
- These are the sons of Leah, whom she bore to Jacob in Paddan Aram, with his daughter Dinah. All the souls of his sons and his daughters were thirty-three.
- American Standard Version (ASV)
- These are the sons of Leah, whom she bare unto Jacob in Paddan-aram, with his daughter Dinah: all the souls of his sons and his daughters were thirty and three.
- Bible in Basic English (BBE)
- All these, together with his daughter Dinah, were the children of Leah, whom Jacob had by her in Paddan-aram; they were thirty-three in number.
- Darby Translation (DBY)
- — These are the sons of Leah, whom she bore to Jacob in Padan-Aram; and his daughter, Dinah. All the souls of his sons and his daughters were thirty-three.
- Webster's Bible (WBS)
- These [are] the sons of Leah, which she bore to Jacob in Padan-aram, with his daughter Dinah: all the souls of his sons and his daughters [were] thirty and three.
- Young's Literal Translation (YLT)
- These [are] sons of Leah whom she bare to Jacob in Padan-Aram, and Dinah his daughter; all the persons of his sons and his daughters [are] thirty and three.
Read in context
- 13ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು.
- 14ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
- 15ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
- 16ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು.
- 17ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು.
Cross references
- Genesis 30:17–21 ಆದಿಕಾಂಡ 30:17–21ಆಗ ದೇವರು ಲೇಯಳನ್ನು ಆಲೈಸಿದ್ದರಿಂದ ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು. ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು. ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು; ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು. ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.
- Genesis 29:32–35 ಆದಿಕಾಂಡ 29:32–35ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು. ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು. ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು. ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Numbers 26:1–65 ಅರಣ್ಯಕಾಂಡ 26:1–65ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ-- ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗುವದಕ್ಕೆ ಶಕ್ತರಾದವರೆಲ್ಲರ ಲೆಕ್ಕವನ್ನು ಅವರ ತಂದೆಯ ಮನೆಗಳ ಪ್ರಕಾರ ತಕ್ಕೊಳ್ಳಿರಿ ಅಂದನು. ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು. ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ. ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ. ಪಲ್ಲೂವಿನ ಕುಮಾರರು; ಎಲೀಯಾಬ್. ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ. ಕುಟುಂಬಗಳ ಪ್ರಕಾರ ಸಿಮೆಯೋನನ ಕುಮಾ ರರು: ನೆಮೂವೇಲನಿಂದ ನೆಮೂವೇಲ್ಯರ ಕುಟುಂಬ; ಯಾವಿಾನನಿಂದ ಯಾವಿಾನ್ಯರ ಕುಟುಂಬ; ಯಾಕೀನ ನಿಂದ ಯಾಕೀನ್ಯರ ಕುಟುಂಬ; ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ. ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ. ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ. ಒಜ್ನೀಯಿಂದ ಒಜ್ನೀಯರ ಕುಟುಂಬ; ಏರೀಯಿಂದ ಏರೀಯರ ಕುಟುಂಬ; ಅರೋದನಿಂದ ಅರೋದ್ಯರ ಕುಟುಂಬ. ಅರೇಲೀಯಿಂದ ಅರೇಲೀ ಯರ ಕುಟುಂಬ. ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ. ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ. ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ. ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ; ಯಾಶೂಬನಿಂದ ಯಾಶೂ ಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ. ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ. ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ. ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ. ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ. ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ; ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ; ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ; ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ. ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ. ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ. ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ; ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ. ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ. ಕುಟುಂಬಗಳ ಪ್ರಕಾರ ಬೆನ್ಯಾವಿಾನನ ಕುಮಾ ರರು: ಬೆಲಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲ ನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ; ಶೂಫಾಮನಿಂದ ಶೂಫಾ ಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ; ಬೆಲಗನ ಕುಮಾರರು; ಅರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ. ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ. ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಎಣಿಸಲ್ಪ ಟ್ಟವರು ಅರವತ್ತುನಾಲ್ಕು ಸಾವಿರದ ನಾನೂರು ಮಂದಿ. ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ. ಬೆರೀಯನ ಕುಮಾರರು; ಹೇಬೆರನಿಂದ ಹೇಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ. ಆಶೇರನ ಮಗಳ ಹೆಸರು ಸಾರಳು. ಲೆಕ್ಕಾನುಸಾರವಾದ ಆಶೇರನ ಕುಮಾರರ ಕುಟುಂಬಗಳು ಇವೇ; ಅವರು ಐವತ್ತು ಮೂರುಸಾವಿರದ ನಾನೂರು ಮಂದಿ. ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ; ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ. ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದುಸಾವಿರದ ನಾನೂರು ಮಂದಿ. ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವರು ಇವರು; ಆರುಲಕ್ಷ ಒಂದುಸಾವಿರದ ಏಳುನೂರ ಮೂವತ್ತು ಮಂದಿ. ಕರ್ತನು ಮೋಶೆಯ ಸಂಗಡ ಮಾತನಾಡಿ ಇವರಿಗೆ ದೇಶವನ್ನು ಹೆಸರುಗಳ ಲೆಕ್ಕದ ಪ್ರಕಾರ ಸ್ವಾಸ್ತ್ಯವಾಗಿ ಹಂಚಿಕೊಡಬೇಕು. ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು. ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು. ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು. ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಸಲ್ಪ ಟ್ಟವರು ಇವರೇ. ಗೆರ್ಷೋನನಿಂದ ಗೆರ್ಷೋನ್ಯರ ಕುಟುಂಬ; ಕೆಹಾತನಿಂದ ಕೆಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ. ಲೇವಿಯರ ಕುಟುಂಬಗಳು ಇವೇ: ಲಿಬ್ನೀಯರ ಕುಟುಂಬ; ಹೆಬ್ರೋನ್ಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹಿಯರ ಕುಟುಂಬ; ಆದರೆ ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಐಗುಪ್ತದಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆ ಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು. ಆರೋನನಿಗೆ ನಾದಾಬ್ ಅಬೀಹೂ ಎಲ್ಲಾಜರನೂ ಈತಾಮಾರ್ ಹುಟ್ಟಿದರು. ಆದರೆ ನಾದಾಬನೂ ಅಬೀಹೂ ಕರ್ತನ ಮುಂದೆ ಅನ್ಯಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು. ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ. ಎಣಿಸಲ್ಪಟ್ಟವರಾದ ಇವರನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ ಮಕ್ಕ ಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು. ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ. ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Numbers 1:1–54 ಅರಣ್ಯಕಾಂಡ 1:1–54ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ-- ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ. ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ. ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ. ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್, ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್, ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್, ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್, ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್, ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್, ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್, ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್, ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್, ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್. ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು, ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ. ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು. ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು. ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು. ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು. ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು. ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು. ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು. ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಎಫ್ರಾಯಾಮ್ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು. ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು. ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು. ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು. ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು. ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು. ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು. ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು. ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ. ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ-- ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ. ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು. ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು. ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Exodus 1:2–3 ವಿಮೋಚನಕಾಂಡ 1:2–3ರೂಬೇನ್ ಸಿಮೆಯೋನ್ ಲೇವಿ ಯೆಹೂದ ಇಸ್ಸಾಕಾರ್ ಜೆಬುಲೂನ್ ಬೆನ್ಯಾವಿಾನ್
- Genesis 34:1–31 ಆದಿಕಾಂಡ 34:1–31ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು. ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು. ಅವನ ಮನಸ್ಸು ಯಾಕೋಬನ ಮಗಳಾದ ದೀನಳನ್ನು ಅಂಟಿಕೊಂಡಿತ್ತು. ಅವನು ಆ ಹುಡುಗಿಯನ್ನು ಪ್ರೀತಿಮಾಡಿ ಆಕೆಯೊಂದಿಗೆ ದಯೆ ಯಿಂದ ಮಾತನಾಡಿದನು. ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು. ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು. ಆಗ ಶೆಕೆಮನ ತಂದೆಯಾದ ಹಮೋರನು ಹೊರಗೆ ಯಾಕೋಬನ ಸಂಗಡ ಮಾತನಾಡುವದಕ್ಕೆ ಬಂದನು. ಯಾಕೋಬನ ಮಕ್ಕಳು ಅದನ್ನು ಕೇಳಿದಾಗ ಅವರು ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ ಇಸ್ರಾಯೇಲಿ ನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ ಆ ಮನುಷ್ಯರು ವ್ಯಸನಪಟ್ಟು ಬಹಳ ಉರಿಗೊಂಡರು. ಅದು ಹಾಗೆ ಆಗಬಾರದಾಗಿತ್ತು. ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ; ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ. ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು. ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು. ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು. ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು. ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ. ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು. ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು; ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು. ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು. ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ-- ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ. ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು. ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು. ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು. ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು. ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು. ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು. ಅವರ ಕುರಿ, ದನ, ಕತ್ತೆಗಳನ್ನು ಪಟ್ಟಣದಲ್ಲಿಯೂ ಹೊಲದಲ್ಲಿಯೂ ಇದ್ದವುಗಳೆಲ್ಲವನ್ನು ತಕ್ಕೊಂಡರು. ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು. ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು. ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Genesis 49:3–15 ಆದಿಕಾಂಡ 49:3–15ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ; ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು. ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು. ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು. ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ. ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
- Genesis 35:23 ಆದಿಕಾಂಡ 35:23ಅವರಲ್ಲಿ ಲೇಯಳ ಕುಮಾರರು: ಯಾಕೋಬನ ಚೊಚ್ಚಲ ಮಗನಾದ ರೂಬೇನನು ಸಿಮೆಯೋನನು ಲೇವಿಯು ಯೆಹೂದನು ಇಸ್ಸಾಕಾರನು ಮತ್ತು ಜೆಬೂಲೂನನು.
- Genesis 25:20 ಆದಿಕಾಂಡ 25:20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- 1 Chronicles 2:1 1 ಪೂರ್ವಕಾಲವೃತ್ತಾಂತ 2:1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
- Numbers 10:1–36 ಅರಣ್ಯಕಾಂಡ 10:1–36ಕರ್ತನು ಮೋಶೆಗೆ ಹೇಳಿದ್ದೇನೆಂದರೆ ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ. ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು. ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು. ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು. ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು. ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು. ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು. ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು. ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು. ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು. ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು. ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು. ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು. ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು. ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು. ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು. ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು. ಈ ಪ್ರಕಾರ ಇಸ್ರಾಯೇಲ್ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು. ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು. ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು. ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ. ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು. ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು. ಅವರು ಪಾಳೆಯದಿಂದ ಹೊರಟಾಗ ಕರ್ತನ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು. ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು. ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
Original words (Hebrew)
- sons · H1121בֵּן bên
- Leah · H3812לֵאָה Lêʼâh
- bare · H3205יָלַד yâlad
- Jacob · H3290יַעֲקֹב Yaʻăqôb
- Padan-aram · H6307פַּדָּן Paddân
- daughter · H1323בַּת bath
- Dinah · H1783דִּינָה Dîynâh
- souls · H5315נֶפֶשׁ nephesh
- sons · H1121בֵּן bên
- daughters · H1323בַּת bath
- thirty · H7970שְׁלוֹשִׁים shᵉlôwshîym
- three · H7969שָׁלוֹשׁ shâlôwsh