Genesis · chapter 46 · verse 4
Genesis 46:4 in Kannada
ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
Naanu ninna sangada aiguptakke hoguvenu. Naane nishchayavaagi ninnannu melakke (kaanaanige) tirigi baramaaduvenu. Yosephanu ninna kannugala mele tanna kai iduvanu andanu.
Genesis 46:4 in English
- King James Version (KJV)
- I will go down with thee into Egypt; and I will also surely bring thee up [again:] and Joseph shall put his hand upon thine eyes.
- World English Bible (WEB)
- I will go down with you into Egypt. I will also surely bring you up again. Joseph’s hand will close your eyes.”
- American Standard Version (ASV)
- I will go down with thee into Egypt; and I will also surely bring thee up again: and Joseph shall put his hand upon thine eyes.
- Bible in Basic English (BBE)
- I will go down with you to Egypt, and I will see that you come back again, and at your death Joseph will put his hands on your eyes.
- Darby Translation (DBY)
- I will go down with thee to Egypt, and I will also certainly bring thee up; and Joseph shall put his hand on thine eyes.
- Webster's Bible (WBS)
- I will go down with thee into Egypt; and I will also surely bring thee up [again]: and Joseph shall put his hand upon thine eyes.
- Young's Literal Translation (YLT)
- I — I go down with thee to Egypt, and I — I also certainly bring thee up, and Joseph doth put his hand on thine eyes.'
Read in context
- 2ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
- 3ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
- 4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
- 5ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
- 6ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
Cross references
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Genesis 48:21 ಆದಿಕಾಂಡ 48:21ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Genesis 50:1 ಆದಿಕಾಂಡ 50:1ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
- Genesis 50:24–25 ಆದಿಕಾಂಡ 50:24–25ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು. ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- Genesis 15:14–16 ಆದಿಕಾಂಡ 15:14–16ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
- Isaiah 43:1–2 ಯೆಶಾಯ 43:1–2ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Genesis 50:5 ಆದಿಕಾಂಡ 50:5ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.