Genesis · chapter 47 · verse 12
Genesis 47:12 in Kannada
ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
Yosephanu tanna tandeyannoo tanna saho dararannoo tanna tandeya maneyavarellarannoo kutumbagala prakaara aahaarakke kottu avarannu sanrakshane maadidanu.
Genesis 47:12 in English
- King James Version (KJV)
- And Joseph nourished his father, and his brethren, and all his father’s household, with bread, according to [their] families.
- World English Bible (WEB)
- Joseph provided his father, his brothers, and all of his father’s household with bread, according to the sizes of their families.
- American Standard Version (ASV)
- And Joseph nourished his father, and his brethren, and all his father’s household, with bread, according to their families.
- Bible in Basic English (BBE)
- And Joseph took care of his father and his brothers and all his father's people, giving them food for the needs of their families.
- Darby Translation (DBY)
- And Joseph maintained his father, and his brethren, and all his father's household, with bread, according to the number of the little ones.
- Webster's Bible (WBS)
- And Joseph nourished his father, and his brethren, and all his father's household, with bread according to [their] families.
- Young's Literal Translation (YLT)
- and Joseph nourisheth his father, and his brethren, and all the house of his father [with] bread, according to the mouth of the infants.
Read in context
- 10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
- 11ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
- 12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
- 13ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು.
- 14ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
Cross references
- Genesis 45:11 ಆದಿಕಾಂಡ 45:11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- 1 Thessalonians 2:7 1 ಥೆಸಲೊನೀಕದವರಿಗೆ 2:7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- Matthew 15:4–6 ಮತ್ತಾಯನು 15:4–6ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
- Genesis 47:24 ಆದಿಕಾಂಡ 47:24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
- Ruth 4:15 ರೂತಳು 4:15ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
- Genesis 47:1 ಆದಿಕಾಂಡ 47:1ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್ ಸೀಮೆಯಲ್ಲಿ ಇದ್ದಾರೆ ಅಂದನು.
- 1 Timothy 5:4 1 ತಿಮೊಥೆಯನಿಗೆ 5:4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- Mark 7:10–13 ಮಾರ್ಕನು 7:10–13ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Genesis 47:21 ಆದಿಕಾಂಡ 47:21ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.