Genesis · chapter 48 · verse 21
Genesis 48:21 in Kannada
ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
Aaga israayelanu yosephanige--igo, naanu saayuttene; aadare devaru nimma sangadaviddu nimmannu nimma tandegala deshakke matte serisuvanu.idallade naanu nanna katti billugalinda amoriyara vashadinda takkonda ondu paalannu ninna sahodarariginta hechchaagi ninage kottiddene andanu.
Genesis 48:21 in English
- King James Version (KJV)
- And Israel said unto Joseph, Behold, I die: but God shall be with you, and bring you again unto the land of your fathers.
- World English Bible (WEB)
- Israel said to Joseph, “Behold, I am dying, but God will be with you, and bring you again to the land of your fathers.
- American Standard Version (ASV)
- And Israel said unto Joseph, Behold, I die: but God will be with you, and bring you again unto the land of your fathers.
- Bible in Basic English (BBE)
- Then Israel said to Joseph, Now my death is near; but God will be with you, guiding you back to the land of your fathers.
- Darby Translation (DBY)
- And Israel said to Joseph, Behold, I die; and God will be with you, and bring you again to the land of your fathers.
- Webster's Bible (WBS)
- And Israel said to Joseph, Behold, I die; but God shall be with you, and bring you again to the land of your fathers.
- Young's Literal Translation (YLT)
- And Israel saith unto Joseph, 'Lo, I am dying, and God hath been with you, and hath brought you back unto the land of your fathers;
Read in context
- 19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
- 20ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- 21ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- 22ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
Cross references
- Genesis 46:4 ಆದಿಕಾಂಡ 46:4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
- Genesis 50:24 ಆದಿಕಾಂಡ 50:24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
- Genesis 28:15 ಆದಿಕಾಂಡ 28:15ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Hebrews 7:3 ಇಬ್ರಿಯರಿಗೆ 7:3ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
- Hebrews 7:23–25 ಇಬ್ರಿಯರಿಗೆ 7:23–25ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು; ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Zechariah 1:5–6 ಜೆಕರ್ಯ 1:5–6ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- 2 Timothy 4:6 2 ತಿಮೊಥೆಯನಿಗೆ 4:6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- Psalm 18:46 ಕೀರ್ತನೆಗಳು 18:46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
- Joshua 1:9 ಯೆಹೋಶುವ 1:9ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Genesis 37:1 ಆದಿಕಾಂಡ 37:1ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು.
- Hebrews 7:8 ಇಬ್ರಿಯರಿಗೆ 7:8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.