Genesis · chapter 49 · verse 1
Genesis 49:1 in Kannada
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
Aaga yaakobanu tanna kumaararannu kareyisi avarige neevellaroo koodi kolliri, antyadinagalalli sambhavisuvadannu nimage tilisuttene.
Genesis 49:1 in English
- King James Version (KJV)
- And Jacob called unto his sons, and said, Gather yourselves together, that I may tell you [that] which shall befall you in the last days.
- World English Bible (WEB)
- Jacob called to his sons, and said: “Gather yourselves together, that I may tell you that which will happen to you in the days to come.
- American Standard Version (ASV)
- And Jacob called unto his sons, and said: Gather yourselves together, that I may tell you that which shall befall you in the latter days.
- Bible in Basic English (BBE)
- And Jacob sent for his sons, and said, Come together, all of you, so that I may give you news of your fate in future times.
- Darby Translation (DBY)
- And Jacob called his sons, and said, Gather yourselves together, and I will tell you what will befall you at the end of days.
- Webster's Bible (WBS)
- And Jacob called to his sons, and said, Assemble yourselves, that I may tell you [that] which shall befall you in the last days.
- Young's Literal Translation (YLT)
- And Jacob calleth unto his sons and saith, 'Be gathered together, and I declare to you that which doth happen with you in the latter end of the days.
Read in context
- 1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
- 2ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.
- 3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
Cross references
- Numbers 24:14 ಅರಣ್ಯಕಾಂಡ 24:14ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
- Jeremiah 23:20 ಯೆರೆಮೀಯ 23:20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- Deuteronomy 4:30 ಧರ್ಮೋಪದೇಶಕಾಂಡ 4:30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- Isaiah 39:6 ಯೆಶಾಯ 39:6ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ.
- Deuteronomy 31:12 ಧರ್ಮೋಪದೇಶಕಾಂಡ 31:12ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Hebrews 10:24–25 ಇಬ್ರಿಯರಿಗೆ 10:24–25ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ. ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- Psalm 25:14 ಕೀರ್ತನೆಗಳು 25:14ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
- Revelation 4:1 ಪ್ರಕಟನೆ 4:1ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Deuteronomy 33:1–29 ಧರ್ಮೋಪದೇಶಕಾಂಡ 33:1–29ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ-- ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು. ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ. ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು. ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು. ರೂಬೇನನು ಸಾಯದೆ ಬದುಕಲಿ; ಅವನ ಜನ ಸ್ವಲ್ಪವಾಗದಿರಲಿ. ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು. ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು; ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು. ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು. ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ. ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು. ಅವನು ಜೆಬುಲೂನನ ವಿಷಯವಾಗಿ--ಜೆಬು ಲೂನನೇ, ನೀನು ಹೊರಡುವದರಲ್ಲಿ ಸಂತೋಷ ಪಡು. ಇಸ್ಸಾಕಾರನೇ ನಿನ್ನ ಗುಡಾರಗಳಲ್ಲಿ ಸಂತೋಷ ಪಡು. ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು. ಗಾದನ ವಿಷಯವಾಗಿ--ಗಾದನನ್ನು ವಿಸ್ತರಿಸ ಮಾಡಿದಾತನು ಸ್ತುತಿಹೊಂದಲಿ; ಅವನು ಸಿಂಹದಂತೆ ಮಲಗಿಕೊಂಡು ತೋಳನ್ನೂ ನೆತ್ತಿಯನ್ನೂ ಕೀಳುತ್ತಾನೆ. ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು. ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು. ಅವನು ನಫ್ತಾಲಿಯ ವಿಷಯವಾಗಿ--ಓ ನಫ್ತಾಲಿಯೇ, ಅನುಗ್ರಹದಿಂದ ತೃಪ್ತನೇ, ಕರ್ತನ ಆಶೀರ್ವಾದದಿಂದ ತುಂಬಿದವನೇ, ಪಶ್ಚಿಮವನ್ನೂ ದಕ್ಷಿಣವನ್ನೂ ಸ್ವಾಧೀನಮಾಡಿಕೋ ಎಂದು ಹೇಳಿದನು. ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ. ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು. ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ. ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ. ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.